ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ತ ಕೇರಳದ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದರೆ ಇತ್ತ ಎನ್‌ಡಿಎ ತನ್ನ ಪ್ರಚಾರ ಅಭಿಯಾನ ಇನ್ನಷ್ಟು ಬಿರುಸುಗೊಳಿಸಿದೆ.
ಕೇಂದ್ರ ಪ್ರವಾಸೋದ್ಯಮ ಮತ್ತು ಪೆಟ್ರೋಲಿಯಂ ರಾಜ್ಯ ಸಚಿವ ಸುರೇಶ್‌ಗೋಪಿ ಕಾಸರಗೋಡು ಜಿಲ್ಲೆಗೆ ಕಾಲಿಟ್ಟಿದ್ದು, ಕಾಸರಗೋಡು, ಮಂಜೇಶ್ವರ ಮಂಡಲದಲ್ಲಿ ಅವರು ಪಕ್ಷದ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಇದರೊಂದಿಗೆ ಅವರು ಅಭ್ಯರ್ಥಿಗಳು, ಕಾರ್ಯಕರ್ತರಲ್ಲಿ ಹೊಸ ಹುರುಪು ನೀಡಿದ್ದಾರೆ.
ಪುರಾಣ ಪ್ರಸಿದ್ಧ ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ. ಸುರೇಂದ್ರನ್ ಪರ ಗೋಡೆ ಬರಹ ಬರೆಯುವ ಮೂಲಕ ಕುಂಬಳೆ ಪೇಟೆಯಲ್ಲಿ, ಕಾಸರಗೋಡು ನಗರ ಪೊಲೀಸ್ ಠಾಣೆ ವಠಾರದಲ್ಲಿ ಗೋಡೆ ಬರಹದ ಮೂಲಕ ಕಾಸರಗೋಡು ಕ್ಷೇತ್ರದಲ್ಲಿನ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು.

ಇದಕ್ಕೂ ಮುನ್ನ ಮಂಜೇಶ್ವರಂ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ. ಸುರೇಂದ್ರನ್, ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷ ಎಂ.ಎಲ್. ಅಶ್ವಿನಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಅವರನ್ನು ಕುಂಬಳ ಬಿಜೆಪಿ ಕ್ಷೇತ್ರ ಸಮಿತಿ ಕಚೇರಿ ಆವರಣದಲ್ಲಿ ಸ್ವಾಗತಿಸಿದರು.
ಬಳಿಕ ಸರೋವರ ಕ್ಷೇತ್ರ ಪ್ರಸಿದ್ಧಿಯ ಅನಂತಪುರ ಶ್ರೀ ಪದ್ಮನಾಭ ಸ್ವಾಮಿ ದೇವಸ್ಥಾನ, ಕಾಸರಗೋಡು ಕಡಪ್ಪುರ ಕುರುಂಬಾ ಭಗವತೀ ಕ್ಷೇತ್ರಕ್ಕೆ ಭೇಟಿ ನೀಡಿದರು. ನಂತರ ಕಾಸರಗೋಡು ನಗರ ಪೊಲೀಸ್ ಠಾಣೆ ವಠಾರದಲ್ಲಿ ಗೋಡೆ ಬರಹದ ಮೂಲಕ ಕಾಸರಗೋಡು ಕ್ಷೇತ್ರದಲ್ಲಿನ ಪ್ರಚಾರಕಾರ್ಯಕ್ಕೆ ಚಾಲನೆ ನೀಡಿದರು.
ಬಿಜೆಪಿ ರಾಜ್ಯ ವಕ್ತಾರ ವಕೀಲ ವಿ.ಪಿ. ಶ್ರೀಪದ್ಮನಾಭನ್, ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ವಿ.ರವೀಂದ್ರನ್, ಸುರೇಶ್ ಕುಮಾರ್ ಶೆಟ್ಟಿ, ಕೋಯಿಕ್ಕೋಡ್ ವಲಯ ಸಮಿತಿ ಅಧ್ಯಕ್ಷ ವಕೀಲ ಕೆ.ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ, ರಾಜ್ಯ ಸಮಿತಿ ಸದಸ್ಯರಾದ ಸವಿತಾ ಟೀಚರ್, ಕುಂಟಾರು ರವೀಶ ತಂತ್ರಿ, ಜಿಲ್ಲಾ ಉಪಾಧ್ಯಕ್ಷ ಪಿ. ರಮೇಶ್, ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ ಮಜಲ್, ಜಿಲ್ಲಾ ಕೋಶಾಧಿಕಾರಿ ವೀಣಾ ಅರುಣಕುಮಾರ್. ಶೆಟ್ಟಿ, ಸೆಲ್ ಸಂಯೋಜಕ ಸುಕುಮಾರ್ ಕುದುರೆಪ್ಪಾಡಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಕೆ.ಎಸ್. ರಮಣಿ, ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಧರ ಕೂಡ್ಲೂ, ಅರುಣಕುಮಾರ ಶೆಟ್ಟಿ, ಕಿಶೋರ್, ಮಂಜೇಶ್ವರ ಮಂಡಲ ಎನ್‌ಡಿಎ ಸಂಚಾಲಕ ವಿಜಯ್ ಕುಮಾರ್ ರೈ, ಜಿಲ್ಲಾ ಉಪಾಧ್ಯಕ್ಷ ಪಿ. ರಮೇಶ್, ಮಂಡಲ ಅಧ್ಯಕ್ಷ ಸುನಿಲ್ ಅನಂತಪುರ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ಎಸ್., ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು.



