March 20, 2026
Friday, March 20, 2026
spot_img

SHOCKING | ಔಷಧ ನೀಡುತ್ತಿದ್ದ ವೈದ್ಯೆ ಮೇಲೆ ದಾಳಿ ಮಾಡಿ ಕೊಂದ ನೀರಾನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಿವಮೊಗ್ಗ ನಗರದ ತಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆಗೆ ಚಿಕಿತ್ಸೆ ನೀಡಲು ಬಂದ ಪಶುವೈದ್ಯೆ ಮೃತಪಟ್ಟಿದ್ದಾರೆ.

ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ಡಾ. ಸಮೀಕ್ಷಾ ರೆಡ್ಡಿ ನೀರಾನೆಗೆ ಚಿಕಿತ್ಸೆ ನೀಡಲು ತೆರಳಿದ್ದರು. ಈ ವೇಳೆ ಹಿಪ್ಪೋ ವೈದ್ಯೆಯ ಮೇಲೆ ದಾಳಿ ಮಾಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಮೀಕ್ಷಾ ಮೃತಪಟ್ಟಿದ್ದಾರೆ.

ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸಂತಾಪ ಸೂಚಿಸಿದ್ದು, ನಿಮ್ಮ ಜೊತೆ ನಾವಿದ್ದೇವೆ ಎಂದು ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ.

ಈ ದುರಂತದ ಬಗ್ಗೆ ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳನ್ನು ಒಳಗೊಂಡ ತಂಡದಿಂದ ತನಿಖೆ ಮಾಡಿಸಿ, 7 ದಿನಗಳ ಒಳಗಾಗಿ ವರದಿ ನೀಡುವಂತೆಯೂ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !