ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಯುದ್ಧ ಪರಿಸ್ಥಿತಿಯ ಹಿನ್ನೆಲೆ, ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಪ್ರಮುಖ ಎಚ್ಚರಿಕೆ ನೀಡಿದೆ. ಗಲ್ಫ್ ಪ್ರದೇಶದ ಹಲವು ವಾಯುಪ್ರದೇಶವನ್ನು ತಪ್ಪಿಸುವಂತೆ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.
ಡಿಜಿಸಿಎ ಸಲಹೆಯಂತೆ, ಇರಾನ್, ಇರಾಕ್, ಇಸ್ರೇಲ್, ಕತಾರ್ ಸೇರಿದಂತೆ ಒಟ್ಟು 9 ದೇಶಗಳ ವಾಯುಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ಸೂಚಿಸಲಾಗಿದೆ. ಆದರೆ ಕೆಲವು ನಿಯಮಗಳೊಂದಿಗೆ ಸೌದಿ ಅರೇಬಿಯಾ ಮತ್ತು ಓಮನ್ ಮೇಲೆ ವಿಮಾನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ವಿಮಾನಗಳು 32,000 ಅಡಿ ಎತ್ತರಕ್ಕಿಂತ ಕಡಿಮೆ ಹಾರಾಟ ನಡೆಸಬಾರದು ಎಂಬುದೂ ಸೂಚಿಸಲಾಗಿದೆ. ಇತ್ತೀಚಿನ ಅಮೆರಿಕಾ-ಇಸ್ರೇಲ್ ದಾಳಿಗಳಿಂದಾಗಿ ಆ ಪ್ರದೇಶದಲ್ಲಿ ಭದ್ರತಾ ಅಪಾಯ ಹೆಚ್ಚಾಗಿದೆ ಎಂದು ಡಿಜಿಸಿಎ ತಿಳಿಸಿದೆ.
ಇದನ್ನೂ ಓದಿ:
ಇರಾನ್‌ನ ಪ್ರತೀಕಾರದ ಬೆದರಿಕೆಗಳಿಂದ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದ್ದು, ವಿಮಾನ ಸಂಚಾರಕ್ಕೆ ಅಪಾಯ ಉಂಟಾಗಿದೆ. ಈ ಮಾರ್ಗಸೂಚಿಗಳು ತಕ್ಷಣದಿಂದ ಜಾರಿಗೆ ಬಂದು ಮಾರ್ಚ್ 28ರವರೆಗೆ ಅನ್ವಯವಾಗಲಿವೆ.
ಇದೇ ವೇಳೆ, ಗಲ್ಫ್ ಪ್ರದೇಶದ ಸಂಘರ್ಷದಿಂದ ಜಾಗತಿಕ ಇಂಧನ ಸರಬರಾಜಿನ ಮೇಲೂ ಪರಿಣಾಮ ಬೀರಿದ್ದು, ಎಲ್‌ಎನ್‌ಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಇದರಿಂದ ಭಾರತ ಸೇರಿದಂತೆ ಹಲವು ದೇಶಗಳಿಗೆ ಸಂಕಷ್ಟ ಎದುರಾಗುವ ಆತಂಕ ವ್ಯಕ್ತವಾಗಿದೆ.



