June 29, 2026
Monday, June 29, 2026
spot_img

ಆಕ್ಷನ್‌ ಬ್ರೇಕ್‌ ಶೂಟ್‌ ಮಾಡುತ್ತಾ ಭೀಕರ ಅಪಘಾತ: ರೀಲ್ಸ್‌ ಹುಚ್ಚಿಗೆ ಜೀವವೇ ಹೋಯ್ತು

ಹೊಸದಿಗಂತ ವರದಿ ಹುಬ್ಬಳ್ಳಿ:

ಹದಿನೈದು ವರ್ಷದ ಬಾಲಕ ರೀಲ್ಸ್ ಮಾಡಲು ಹೋಗಿ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಶೇಜವಾಡ್ಕರ್ ಬಡಾವಣೆಯಲ್ಲಿ ನಡೆದಿದೆ.

ರವಿನಗರದ ನಿವಾಸಿ, ಬಿಜೆಪಿ‌ ಮುಖಂಡ‌ ವೀರೇಶ ಸಂಗಳ ಅವರ ಪುತ್ರ ನಮೀಷ್ ಸಂಗಳದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಕಾರು ಮತ್ತು ಸ್ಕೂಟಿ ಮಧ್ಯೆ ಅ್ಯಕ್ಸನ್ ಬ್ರೇಕ್ ರೀಲ್ಸ್ ಮಾಡಲು ಹೋಗಿ ಅಪಘಾತವಾಗಿದೆ‌. ಉತ್ತರ ಸಂಚಾರ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಈ ಕುರಿತು ಪೊಲೀಸ್ ಆಯುಕ್ತ ಎನ್ ಶಶಿಕುಮಾರ ಪ್ರತಿಕ್ರಿಯಿಸಿ, ಆಡಿ ಕಾರ್ ಮತ್ತು ಎಲೆಕ್ಟ್ರಿಕಲ್ ಸ್ಕೂಟಿ ಎದುರು ಬದುರು ವೇಗಾವಾಗಿ ಬಂದು ತಕ್ಷಣ ಬ್ರೇಕ್ ಹಾಕುವ(ಆ್ಯಕ್ಸನ್ ಬ್ರೇಕ್ ರೀಲ್ಸ್) ವೇಳೆ, ನಿಯಂತ್ರಣ ತಪ್ಪಿ ಕಾರ್, ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಸ್ಕೂಟಿಯಲ್ಲಿದ್ದ ನಮೀಷ್ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿಸಿದರು.

ಯುವಕ ಮೈಸೂರಿನಲ್ಲಿ ಓದುತ್ತಿದ್ದ. ಒಂಬತ್ತನೇ ತರಗತಿಯ ವಾರ್ಷಿಕ ಪರೀಕ್ಷೆ ಮುಗಿಸಿಕೊಂಡು ಯುಗಾದಿ ಹಬ್ಬಕ್ಕೆಂದು ಮನೆಗೆ ಬಂದಿದ್ದ. ಅಕ್ಕಪಕ್ಕದ ಸ್ನೇಹಿತರ ಜೊತೆ ಸೇರಿ ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !