ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೋಲಾ ಹುಲ್ಲುಗಾವಲು ಧಗಧಗ ಉರಿಯುತ್ತಿದೆ. ಶೃಂಗೇರಿಯ ಕೆರೆಕಟ್ಟೆ ವಲಯದ ಮಾಣಿಕ್ಯಬೆಟ್ಡ, ವಾಲೀಕುಂಜಗಿರಿ ಸಾಲಿನ 25ಕ್ಕೂ ಹೆಚ್ಚು ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಈ ಬೆಂಕಿಗೆ ಕಾರಣ ಕಾಳ್ಗಿಚ್ಚೋ ಅಥವಾ ಮನುಷ್ಯರೋ ಎಂದು ಅರಣ್ಯ ಇಲಾಖೆ ಶಂಕೆಪಟ್ಟಿದೆ.ಬೆಂಕಿ ಬಿದ್ದಿರುವುದರಿಂದ ನೆಲದಲ್ಲಿ ಗೂಡುಕಟ್ಟುವ ಪಕ್ಷಿಗಳು, ಪ್ರಾಣಿಗಳು, ಅಪರೂಪದ ಸಸ್ಯಸಂಪತ್ತು ಸುಟ್ಟು ಹೋಗಿವೆ. ಈ ಅವಘಡಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಅರಣ್ಯ ವೀಕ್ಷಕರ ನೇಮಕ ಮಾಡಿಕೊಳ್ಳದೇ ಇರುವುದೇ ಅನಾಹುತಕ್ಕೆ ಕಾರಣವಾಗಿದೆ. ಬೆಂಕಿ ನಿಯಂತ್ರಣ ರೇಖೆ, ವೀಕ್ಷಣಾ ಗೋಪುರ ಯಾವುದನ್ನೂ ಇಲಾಖೆ ಮಾಡಿಲ್ಲ. ಅರಣ್ಯ ವಾರದಿಂದ ಹೊತ್ತಿ ಉರಿಯುತ್ತಿದ್ದರೂ ಸ್ಥಳಕ್ಕೆ ಯಾರೂ ಭೇಟಿ ನೀಡಿಲ್ಲ ಎಂದು ಪರಿಸರವಾದಿಗಳು ಕಳವಳ ವ್ಯಕ್ತಪಡಿಸಿದ್ದಾರೆ.



