March 22, 2026
Sunday, March 22, 2026
spot_img

ಸಾರ್ವಜನಿಕರ ನೆಮ್ಮದಿಗೆ ಭಂಗ: ಬೆಳಗಾವಿಯಿಂದ ಮೂರು ಆರೋಪಿಗಳು ಗಡಿಪಾರು

ಹೊಸದಿಗಂತ ವರದಿ,ಬೆಳಗಾವಿ:

ನಗರದಲ್ಲಿ ಕಳೆದ ಕೆಲ ದಿನಗಳಿಂದ ಸಾರ್ವಜನಿಕ ಸ್ಥಳದಲ್ಲಿ, ಮಟ್ಕಾ, ಗಾಂಜಾ ಪ್ರಕರಣದಲ್ಲಿ ಮೂರು ಜನ ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದರು. ಇದೀಗ ಮೂರು ಜನ ಆರೋಪಿಗಳನ್ನು ಬೆಳಗಾವಿ ಪೊಲೀಸರು ಬೆರೆ ಜಿಲ್ಲೆಗಳಿಗೆ ಗಡಿಪಾರು ಮಾಡಿದ್ದಾರೆ.

ಕಳೆದ ಹಲವಾರ ದಿನಗಳಿಂದ ನಿರಂತರವಾಗಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಸಾರ್ವಜನಿಕರ ನೆಮ್ಮದಿ ಓಡಾಟಕ್ಕೆ ತೊಂದರೆ ಕೊಡುತ್ತಿದ್ದ ಮೂವರ ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿಗಡಿಪಾರು ಮಾಡುವುದಕ್ಕೆ ಮುಂದಾಗಿದ್ದಾರೆ.

ಆರೋಪಿಗಳಾದ ಶಹಾಪುರದ ಸರ್ಫರಾಜ ಶಬ್ಬೀರ ಅಹ್ಮದ್ ಶೇಖ್, ಟಿಳಕವಾಡಿ ಅಯೋಧ್ಯಾ ನಗರದ ವಿನಾಯಕ ಪ್ರಕಾಶ ಕೊಲ್ಲಾಪುರಿ ಮತ್ತು ಶಹಾಪುರ ಹೊಸೂರ ಬಸವನಗಲ್ಲಿಯ ಸಾಗರ ಪಾಂಡುರಂಗ ಸಾಲಗುಡೆ ಬಂಧಿತರು.

ಪದೇಪದೇ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿ ಸಾರ್ವಜನಿಕ ನೆಮ್ಮದಿ ಹಾಳು ಮಾಡುತ್ತಿದ್ದ ಆರೋಪದ ಮೇಲೆ ಬೆಳಗಾವಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಫರಾಜ್ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಸ್ಪೀಟ್ ಆಟ ಆಡಿಸುವುದು ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿ ಒಟ್ಟು 16 ಪ್ರಕರಣ ದಾಖಲಾಗಿವೆ.

ವಿನಾಯಕ ಮೇಲೆ ಗಾಂಜಾ ಮಾರಾಟ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿ ಐದು ಪ್ರಕರಣ ದಾಖಲಾಗಿದೆ. ಸಾಗರ ಮೇಲೆ ಇಸ್ಪೀಟ್ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿದ ಆರು ಪ್ರಕರಣ ದಾಖಲಾಗಿದೆ. ಇವರನ್ನು ಮುಂದಿನ ಐದು ತಿಂಗಳ ಅವಧಿಗೆ ವಿಜಯಪುರ , ಕಾರವಾರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಇವರನ್ನು ಗಡಿಪಾರು ಮಾಡಿ ಆದೇಶಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !