June 6, 2026
Saturday, June 6, 2026
spot_img

ಐಪಿಎಲ್ ಆರಂಭಕ್ಕೂ ಮುನ್ನ ಪಂಜಾಬ್‌ಗೆ ಶಾಕ್: ಸ್ಟಾರ್ ವೇಗಿ ಟೂರ್ನಿಯಿಂದಲೇ ಔಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಮ್ಯಾಚ್ ಆರಂಭಕ್ಕೆ ಕ್ಷಣಗಣನೆ ಬಾಕಿ ಉಳಿದಿದ್ದು, ಈ ನಡುವೆ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಉತ್ತಮ ಪ್ರದರ್ಶನ ನೀಡುತ್ತಿರುವ ನ್ಯೂಜಿಲೆಂಡ್ ವೇಗಿ ಲಾಕಿ ಫರ್ಗುಸನ್ ಈ ಬಾರಿ ಪಂದ್ಯದಲ್ಲಿ ಪಾಲ್ಗೊಳ್ಳುವುದು ಅನುಮಾನ ಎಂಬ ಸುದ್ದಿ ಹರಿದಾಡುತ್ತಿದ್ದು, ಇದು ತಂಡದ ಸಹಿತ ಅಭಿಮಾನಿಗಳಿಗೆ ಹೊಸ ಆತಂಕ ಹುಟ್ಟಿಸಿದೆ.

ಫರ್ಗುಸನ್ ಪತ್ನಿ ಮಗುವಿಗೆ ಜನ್ಮ ನೀಡಿದ್ದು, ಹೀಗಾಗಿ ಅವರು ಪಂದ್ಯಕ್ಕಿಂತ ಹೆಚ್ಚಾಗಿ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯುವ ಅವಶ್ಯಕತೆ ಇದ್ದ ಕಾರಣ ಐಪಿಎಲ್‌ನ ಆರಂಭಿಕ ಪಂದ್ಯಗಳಿಗೆ ಗೈರಾಗಲಿದ್ದಾರೆ ಎಂಬ ಸುದ್ದಿ ದಟ್ಟವಾಗಿಯೇ ಕೇಳಿಬರುತ್ತಿದೆ.

೨೦೨೫ರ ಐಪಿಎಲ್ ಮೆಗಾ ಹರಾಜಿನಲ್ಲಿ ಫರ್ಗುಸನ್ ಅವರನ್ನು ಪಂಜಾಬ್ ಕಿಂಗ್ಸ್ ಬರೋಬ್ಬರಿ 2 ಕೋಟಿ ರೂ. ಮೂಲ ಬೆಲೆಗೆ ತಂಡಕ್ಕೆ ಸೇರಿಸಿಕೊಂಡಿತ್ತು. ೨೦೨೬ರಲ್ಲೂ ಅವರನ್ನು ತಂಡದಲ್ಲೇ ಉಳಿಸಿಕೊಂಡಿತ್ತು. ಇದೀಗ ಫರ್ಗುಸನ್ ಅಲಭ್ಯತೆ ಸಾಧ್ಯತೆ ತಂಡಕ್ಕೆ ಹೊಸ ತಲೆನೋವು ತಂದಿಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !