March 21, 2026
Saturday, March 21, 2026
spot_img

ಮತ್ತೆ ಕೈಚಳಕ ತೋರಿದ ಸೈಬರ್ ವಂಚಕರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 15 ಕೋಟಿ ರೂ ಕಳೆದುಕೊಂಡ ಉದ್ಯಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೈಬರ್ ವಂಚಕರ ಹೊಸ ತಂತ್ರಕ್ಕೆ ಬಲಿಯಾಗಿ ವೃದ್ಧ ಉದ್ಯಮಿಯೊಬ್ಬರು ಕೋಟ್ಯಾಂತರ ಹಣ ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವಂಚಕರು ಸುಮಾರು 15 ಕೋಟಿ ರೂಪಾಯಿ ದೋಚಿದ್ದಾರೆ.

ವಂಚಕರು ವಿಡಿಯೋ ಕಾಲ್ ಮೂಲಕ ಸಂಪರ್ಕಿಸಿ, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಬೆದರಿಕೆ ಹಾಕಿದ್ದಾರೆ. ತನಿಖೆ ನಡೆಯುತ್ತಿರುವುದಾಗಿ ಹೇಳಿ, ಹಣವನ್ನು ಸುರಕ್ಷಿತ ಖಾತೆಗೆ ವರ್ಗಾಯಿಸುವಂತೆ ನಂಬಿಸಿದ್ದಾರೆ. ನಂತರ ತನಿಖೆ ಪೂರ್ಣಗೊಂಡ ಬಳಿಕ ಹಣ ಹಿಂತಿರುಗಿಸುವುದಾಗಿ ಭರವಸೆ ನೀಡಿದ್ದಾರೆ.

ಈ ಮಾತುಗಳಿಗೆ ಮೋಸಹೋದ ಉದ್ಯಮಿ ಹಂತ ಹಂತವಾಗಿ ಕೋಟಿ ಕೋಟಿ ಹಣವನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದಾರೆ. ಬಳಿಕ ಅವರು ಸಂಪರ್ಕಕ್ಕೆ ಸಿಗದಾಗ ಅನುಮಾನಗೊಂಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:

ಸಿಇಎನ್ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಈಗಾಗಲೇ ವಂಚಕರ ಖಾತೆಗಳನ್ನು ಮುಚ್ಚಿ, ಸುಮಾರು 90 ಲಕ್ಷ ರೂಪಾಯಿ ಹಣವನ್ನು ಸ್ಥಗಿತಗೊಳಿಸಲಾಗಿದೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ಆರೋಪಿಗಳನ್ನು ಬಂಧಿಸಲು ವಿಶೇಷ ತಂಡ ರಚಿಸಿದೆ. ಇಂತಹ ಕರೆಗಳಿಗೆ ಭಯಪಡುವುದಲ್ಲದೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !