ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ಜಗತ್ತು ಇಂಧನ ಬಿಕ್ಕಟ್ಟು ಎದುರಿಸುತ್ತಿದ್ದು, ಇದರ ನಡುವೆ ಅಮೆರಿಕ ಮುಂದಿನ 30 ದಿನಗಳ ಕಾಲ ಇರಾನ್ ತೈಲದ ಮೇಲೆ ವಿಧಿಸಿದ್ದ ನಿರ್ಬಂಧಗಳಿಗೆ ವಿನಾಯಿತಿ ನೀಡಲಾಗುವುದು ಎಂದು ಘೋಷಿಸಿದೆ.
ಇರಾನ್ ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿದ್ದು , ಇದರ ಬೆನ್ನಲ್ಲೇ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಏರಿಳಿತ ಉಂಟಾಗಿದೆ. ಅಮೆರಿಕಕ್ಕೂ ಇದರ ಹೊಡೆತ ಬಿದ್ದಿದೆ. ಇದರ ಬೆನ್ನಲ್ಲೇ ಈ ಮಹತ್ವದ ನಿರ್ಧಾರ ತೆಗೆದುಗೊಂಡಿದೆ.
ಈ ಕುರಿತು ಮಾಹಿತಿ ನೀಡಿದ ಅಮೆರಿಕಾದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್, ಮಾ. 20 ರಿಂದ ಏ.19 ರ ನಡುವೆ 30 ದಿನಗಳವರೆಗೆ ಹಡಗುಗಳಿಗೆ ಲೋಡ್ ಮಾಡಲಾದ ಇರಾನಿನ ತೈಲ ಉತ್ಪನ್ನಗಳನ್ನು ಮಾರಾಟ ಮಾಡಲು ವಿನಾಯಿತಿ ನೀಡಿದೆ. ಆದರೆ ಈ ಅನುಮತಿ ಕೇವಲ ಸಮುದ್ರದಲ್ಲಿ ಸಿಲುಕಿರುವ ಹಡಗುಗಳಿಗೆ ಮಾತ್ರ ಇದ್ದು, ಯಾವುದೇ ಹೊಸ ಖರೀದಿಗೆ ಅಲ್ಲ ಎಂದು ತಿಳಿಸಿದ್ದಾರೆ.
ಈಗಾಗಲೇ ಮದ್ಯ ಏಷ್ಯಾದಲ್ಲಿನ ಯುದ್ಧದಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಗಗಳಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಲ್ಲೇ ಇದ್ದು, ಪ್ರತಿ ಬ್ಯಾರಲ್ ಗೆ $107 ದಾಟಿದೆ. ಹೀಗಾಗಿ ಅಮೆರಿಕ ಈ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಇದರಿಂದ ಸಮುದ್ರದಲ್ಲಿ ಸಿಲುಕಿರುವ ಸುಮಾರು 140 ಮಿಲಿಯನ್ ಬ್ಯಾರೆಲ್ ತೈಲಗಳು ಬಿಡುಗಡೆಯಾಗಲಿದ್ದು, ಈ ಮೂಲಕ ಇಂಧನ ಪೂರೈಕೆವು ಸುಗಮವಾಗಲಿದ್ದು, ಜೊತೆಗೆ ತೈಲ ಸರಬರಾಜು ಬೆಲೆಯಲ್ಲಿ ಸ್ಥಿರತೆ ಸಾಧಿಸಲು ಸಹಾಯಕವಾಗಲಿದೆ ಎಂದು ಬೆಸೆಂಟ್ ತಿಳಿಸಿದ್ದಾರೆ.



