ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಆರ್ ಪುರಂ ಪ್ರದೇಶದಲ್ಲಿ ನಡೆದಿದೆ.
ಮೇಡಹಳ್ಳಿ ಮೇಲ್ಸೇತುವೆ ಮೇಲೆ ಈ ದುರಂತ ಸಂಭವಿಸಿದೆ. ಮೃತರನ್ನು ವೈಟ್‌ಫೀಲ್ಡ್ ನಿವಾಸಿಗಳಾದ ಮಣಿಕಂಠ, ಸುರೇಶ್ ಹಾಗೂ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.
ಕೋಲಾರದಿಂದ ಆಲೂಗಡ್ಡೆ ಸಾಗಿಸುತ್ತಿದ್ದ ಕ್ಯಾಂಟರ್ ವಾಹನ ಪಂಚರ್ ಆಗಿ ನಿಂತಿದ್ದ ವೇಳೆ ಚಾಲಕ ಟೈರ್ ಬದಲಿಸುತ್ತಿದ್ದರು. ಇದೇ ಸಮಯದಲ್ಲಿ ಹಿಂಬದಿಯಿಂದ ವೇಗವಾಗಿ ಬಂದ ಟಾಟಾ ಏಸ್ ನಿಯಂತ್ರಣ ತಪ್ಪಿ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ:
ಡಿಕ್ಕಿಯ ತೀವ್ರತೆಗೆ ಟಾಟಾ ಏಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಅಪಘಾತದ ಹೊಡೆತಕ್ಕೆ ಮೂವರು ತಕ್ಷಣವೇ ಪ್ರಾಣ ಕಳೆದುಕೊಂಡಿದ್ದಾರೆ. ಸುದ್ದಿ ತಿಳಿದು ಕೆಆರ್ ಪುರಂ ಸಂಚಾರಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಚಾಲಕರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.



