ಹೊಸದಿಗಂತ ಡಿಜಿಟಲ್ ಡೆಸ್ಕ್:
ತರಬೇತಿ ಸಂದರ್ಭದಲ್ಲಿ ಸ್ವಿಮ್ಮಿಂಗ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿದ ದುರ್ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಾನಾವಾಡಿಯ ಕಮಾಂಡೋ ವಿಂಗ್ ಆವರಣದಲ್ಲಿ ಈ ಘಟನೆ ಸಂಭವಿಸಿದೆ.
ಹರಿಯಾಣ ಮೂಲದ ಲೆಫ್ಟಿನೆಂಟ್ ಅಮಿತ್ ಸಿಂಗ್ ಅವರು ಎಂಎಲ್ಐಆರ್‌ಸಿ ಕಮಾಂಡೋ ವಿಂಗ್‌ನಲ್ಲಿ ತರಬೇತಿ ಪಡೆಯುತ್ತಿದ್ದರು. ಇದೇ ವೇಳೆ ಸ್ವಿಮ್ಮಿಂಗ್ ಪೂಲ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದಾಗ ಅವರಿಗೆ ಏಕಾಏಕಿ ತೀವ್ರ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:
ಘಟನೆಯ ತಕ್ಷಣ ಲೈಫ್‌ಗಾರ್ಡ್ ಪ್ರದೀಪ್ ಕುಮಾರ್ ಅವರು ಅವರನ್ನು ನೀರಿನಿಂದ ಹೊರತೆಗೆದು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ನಂತರ ತುರ್ತಾಗಿ ಅಂಬುಲೆನ್ಸ್ ಮೂಲಕ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಅಮಿತ್ ಸಿಂಗ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



