August 30, 2026
Sunday, August 30, 2026
spot_img

ಕಾಗವಾಡದಲ್ಲಿ ಅಗ್ನಿ ತಾಂಡವ: ಶಾರ್ಟ್ ಸರ್ಕ್ಯೂಟ್‌ಗೆ 12ಕ್ಕೂ ಅಧಿಕ ಅಂಗಡಿಗಳು ಭಸ್ಮ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಪ್ಯಾಟಿ ಓಣಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 12ಕ್ಕೂ ಹೆಚ್ಚು ಅಂಗಡಿ ಮುಂಗಟ್ಟುಗಳು ಸುಟ್ಟು ಕರಕಲಾಗಿವೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ವ್ಯಾಪಾರಿಗಳು ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಅನುಭವಿಸಿದ್ದಾರೆ.

ಈ ದುರ್ಘಟನೆಯಲ್ಲಿ ರಸಗೊಬ್ಬರ ಅಂಗಡಿ, ಹೊಟೇಲ್, ಫೋಟೋ ಸ್ಟೂಡಿಯೋ, ಐಸ್‌ಕ್ರೀಂ ಪಾರ್ಲರ್‌ ಹಾಗೂ ರೈತರ ನೀರಾವರಿ ಸಂಘದ ಕಚೇರಿ ಸೇರಿದಂತೆ ಹಲವು ಮಳಿಗೆಗಳು ಬೆಂಕಿಗಾಹುತಿಯಾಗಿವೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸಾರ್ವಜನಿಕರ ನೆರವಿನೊಂದಿಗೆ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಘಟನೆ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !