September 18, 2026
Friday, September 18, 2026
spot_img

ದಾವಣಗೆರೆ-ಬಾಗಲಕೋಟೆ ಬೈ ಎಲೆಕ್ಷನ್: ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದ ಡಿಸಿಎಂ ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ಉಪಚುನಾವಣೆಗೆ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದ ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಎರಡೂ ಕ್ಷೇತ್ರಗಳಲ್ಲಿ ಒಮ್ಮತದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಬಾಗಲಕೋಟೆ: ಹಿರಿಯ ನಾಯಕ ಹೆಚ್.ವೈ. ಮೇಟಿ ಅವರ ಎರಡನೇ ಪುತ್ರ ಉಮೇಶ್ ಮೇಟಿ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ.

ದಾವಣಗೆರೆ ದಕ್ಷಿಣ: ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ಅವಕಾಶ ನೀಡಲಾಗಿದೆ.

ಅಭ್ಯರ್ಥಿಗಳ ಆಯ್ಕೆಯ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಿದ ಡಿ.ಕೆ. ಶಿವಕುಮಾರ್, “ನಾನು, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್, ನಾಸಿರ್ ಹುಸೇನ್, ಸಲೀಂ ಅಹ್ಮದ್ ಸೇರಿದಂತೆ ಎಲ್ಲಾ ಅಲ್ಪಸಂಖ್ಯಾತ ನಾಯಕರು ಮತ್ತು ಎಐಸಿಸಿ ಕಾರ್ಯದರ್ಶಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದೇವೆ. ಎಲ್ಲರ ಸಲಹೆ ಹಾಗೂ ಒಮ್ಮತದ ಮೇರೆಗೆ ಶಾಮನೂರು ಮತ್ತು ಮೇಟಿ ಅವರ ಕುಟುಂಬಸ್ಥರಿಗೆ ಅವಕಾಶ ಮಾಡಿಕೊಡಲಾಗಿದೆ,” ಎಂದರು.

ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಿನಿಂದ ಚುನಾವಣಾ ಕೆಲಸ ಮಾಡಲಿದ್ದಾರೆ. ಈ ಎರಡು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !