March 22, 2026
Sunday, March 22, 2026
spot_img

ಕತಾರ್‌ನಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಆರು ಮಂದಿ ದುರ್ಮರಣ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಮಿಲಿಟರಿ ಹೆಲಿಕಾಪ್ಟರ್ ಪತನವಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ.

ಕತಾರ್ ರಕ್ಷಣಾ ಸಚಿವಾಲಯಕ್ಕೆ ಸೇರಿದ ಈ ಹೆಲಿಕಾಪ್ಟರ್ ಗಸ್ತು ತಿರುಗುತ್ತಿದ್ದ ವೇಳೆ ತಾಂತ್ರಿಕ ದೋಷ ಕಾಣಿಸಿಗೊಂಡಿದ್ದು, ಸಮುದ್ರಕ್ಕೆ ಅಪ್ಪಳಿಸಿದೆ ಎಂದು ಕತಾರ್‌ನ ಸಚಿವಾಲಯ ಮಾಹಿತಿ ನೀಡಿದೆ.

ಈ ಹೆಲಿಕಾಪ್ಟರ್‌ನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಆರು ಜನರು ಸಾವನ್ನಪ್ಪಿದ್ದಾರೆ, ಓರ್ವ ನಾಪತ್ತೆಯಾಗಿದ್ದು, ಆತನ ಶೋಧ ಕಾರ್ಯ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !