March 22, 2026
Sunday, March 22, 2026
spot_img

SHOCKING | ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಹಠಾತ್ ಏರುಪೇರು: ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹೊಸದಿಗಂತ ವರದಿ, ತುಮಕೂರು:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಆರೋಗ್ಯದಲ್ಲಿ ಹಠಾತ್ ಏರುಪೇರು ಉಂಟಾಗಿದ್ದು, ನಗರದ ಸಿದ್ದಗಂಗಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ಕಡೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಸಚಿವರ ಆರೋಗ್ಯದಲ್ಲಿ ದಿಢೀರನೇ ಏರುಪೇರಾಗಿದೆ, ಕೂಡಲೇ ಅವರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ವೈದ್ಯರು ಇಸಿಜಿ ತಪಾಸಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ನಂತರ ಸಚಿವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !