ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬೇಸಿಗೆ ಮಳೆ ಬೀಳುತ್ತಿದೆ. ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದರೆ, ಹಲವೆಡೆ ಸಪ್ಪೆ ಸಪ್ಪೆ ವಾತಾವರಣವಿದೆ. ಇನ್ನೂ ಎರಡು ದಿನ ಇದೇ ವೆದರ್ ಇರಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



