March 23, 2026
Monday, March 23, 2026
spot_img

ನನಗೇನು ಆಗಿಲ್ಲ ಆರೋಗ್ಯವಾಗಿದ್ದೇನೆ: ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ

ಹೊಸದಿಗಂತ ವರದಿ ​ಕೊಪ್ಪಳ:

ನಾನು ಆರೋಗ್ಯವಾಗಿದ್ದು, ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮವಿದ್ದ ಕಾರಣ ನಾಲ್ಕು ದಿನಗಳ ಹಿಂದೆ ಕನಕಗಿರಿ ಮತಕ್ಷೇತ್ರಕ್ಕೆ ಹೋಗಿದ್ದೆ. ಕಾರ್ಯಕ್ರಮ ಮುಗಿಸಿಕೊಂಡು ಕೊಪ್ಪಳದಿಂದ ಬೆಂಗಳೂರಿಗೆ ಹೊರಟು ಬರುವಾಗ ಭಾನುವಾರ‌ ರಾತ್ರಿ ಮಾರ್ಗ ಮಧ್ಯೆ ಎದೆ ಚುಚ್ಚಿದ ಅನುಭವ ಆಯಿತು. ಈ ಹಿನ್ನೆಲೆಯಲ್ಲಿ ನನ್ನ ಕುಟುಂಬದ ವೈದ್ಯರೊಂದಿಗೆ ಕರೆ ಮಾಡಿ ಮಾತನಾಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಒಮ್ಮೆ ತಪಾಸಣೆ ಮಾಡಿಸುವಂತೆ ಸೂಚಿಸಿದರು. ಹೀಗಾಗಿ ಇಲ್ಲಿನ ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಿದೆ. ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಈ ರೀತಿ ಆಗಿದೆ. ಯಾರು ಆತಂಕಪಡುವ ಅಗತ್ಯವಿಲ್ಲ. ನಾನು ಸೋಮವಾರ ಬೆಳಗ್ಗೆ ವಿಧಾನಸಭೆ ಅಧಿವೇಶನದಲ್ಲಿ ಎಂದಿನಂತೆ ಪಾಲ್ಗೊಳ್ಳುತ್ತೇನೆ ಎಂದು ತಿಳಿಸಿದರು.‌

ಯಾರು ಕೂಡ ವದಂತಿಯನ್ನು ಹಬ್ಬಿಸುವುದು ಬೇಡ. ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿದ್ದೇನೆ ಅಷ್ಟೇ. ಆರೋಗ್ಯವಾಗಿದ್ದೇನೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !