March 23, 2026
Monday, March 23, 2026
spot_img

ಮಾಜಿ ವಿಧಾನ ಪರಿಷತ್‌ ಸದಸ್ಯ, ಡಿಕೆಶಿ ಆಪ್ತರಾಗಿದ್ದ ಕರಿಯಣ್ಣ ಸಂಗಟಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ವಿಧಾನ ಪರಿಷತ್‌ ಸದಸ್ಯ, ಡಿಕೆ ಶಿವಕುಮಾರ್‌ ಆಪ್ತರಾಗಿದ್ದ ಕರಿಯಣ್ಣ ಸಂಗಟಿ ನಿಧನರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಕರಿಯಣ್ಣ ಸಂಗಟಿ ಅವರು ರಾಜಕೀಯವಾಗಿ ಸಕ್ರಿಯರಾಗಿದ್ದು, ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಮತ್ತು ಸಂಘಟನಾ ಸಾಮರ್ಥ್ಯದಿಂದ ಅವರು ಜನಮನ್ನಣೆ ಗಳಿಸಿದ್ದರು. ಡಿಕೆ ಶಿವಕುಮಾರ್ ಅವರಿಗೆ ಆಪ್ತರಾಗಿದ್ದ ಅವರು ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಸಂಗಟಿ ಅವರ ನಿಧನಕ್ಕೆ ರಾಜಕೀಯ ವಲಯದಲ್ಲಿ ಶೋಕ ವ್ಯಕ್ತವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !