March 23, 2026
Monday, March 23, 2026
spot_img

Viral | ರನ್​ವೇನಲ್ಲಿ ಅಗ್ನಿಶಾಮಕ ಟ್ರಕ್‌ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ: ವಿಡಿಯೋ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನವು ಅಗ್ನಿಶಾಮಕ ಟ್ರಕ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಆತಂಕ ಮೂಡಿಸಿದೆ. ರನ್‌ವೇ 4ರಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ಏರ್ ಕೆನಡಾ ಎಕ್ಸ್‌ಪ್ರೆಸ್ಗೆ ಸೇರಿದ ವಿಮಾನ ರನ್​ವೇನಲ್ಲಿ ಚಲಿಸುತ್ತಿದ್ದಾಗ ಅಗ್ನಿಶಾಮಕ ವಾಹನದೊಂದಿಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸಂಬಂಧಿಸಿದ ವಿವರಗಳು ಇನ್ನೂ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ:

ಘಟನೆ ನಡೆದ ತಕ್ಷಣ ವಿಮಾನ ನಿಲ್ದಾಣದಲ್ಲಿ ತುರ್ತು ಸೇವಾ ತಂಡಗಳು ಕಾರ್ಯಪ್ರವೃತ್ತಗೊಂಡು ಗಾಯಾಳುಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಮುಂದಾಗಿವೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮಾಹಿತಿ ಹೊರಬಂದಿದೆ.

ಈ ನಡುವೆ, ಅಪಘಾತದ ಕ್ಷಣಗಳನ್ನು ತೋರಿಸುವ ಹಲವು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವಿಡಿಯೋಗಳಲ್ಲಿ ರಕ್ಷಣಾ ಕಾರ್ಯಾಚರಣೆ ಮತ್ತು ಸ್ಥಳಾಂತರಿಸುವ ಕಾರ್ಯಗಳು ನಡೆಯುತ್ತಿರುವುದು ಕಾಣಬಹುದು.

ಘಟನೆಯ ಕುರಿತು ಇನ್ನೂ ಅಧಿಕೃತ ಪ್ರಕಟಣೆ ಹೊರಬಂದಿಲ್ಲ. ಆದರೆ ಅಪಘಾತಕ್ಕೆ ಕಾರಣವೇನು ಎಂಬುದರ ಕುರಿತು ಸಂಬಂಧಿತ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !