ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಎಲ್‌ಪಿಜಿ, ಪೆಟ್ರೋಲ್ ಮತ್ತು ರಸಗೊಬ್ಬರಗಳ ಸರಬರಾಜಿನ ಮೇಲೆ ಸ್ವಲ್ಪ ಮಟ್ಟಿನ ಒತ್ತಡ ಉಂಟಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಆದರೂ ದೇಶದಲ್ಲಿ ರಸಗೊಬ್ಬರಗಳ ಸಾಕಷ್ಟು ಸಂಗ್ರಹವಿದ್ದು, ರೈತರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ಯುದ್ಧವು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತಿದ್ದು, ಭಾರತಕ್ಕೂ ಅದರ ಪ್ರಭಾವ ಸಹಜ ಎಂದು ಹೇಳಿದರು. ವಿಶೇಷವಾಗಿ ಕಚ್ಚಾ ತೈಲ ಮತ್ತು ಅನಿಲ ಸರಬರಾಜು ಹೆಚ್ಚಿನ ಪ್ರಮಾಣದಲ್ಲಿ ಮಧ್ಯಪ್ರಾಚ್ಯದಿಂದ ಆಗುತ್ತಿರುವುದರಿಂದ ಪರಿಸ್ಥಿತಿ ಗಂಭೀರವಾಗಿದೆ ಎಂದರು.
ಇದನ್ನೂ ಓದಿ:
ಹಾರ್ಮುಜ್ ಜಲಸಂಧಿಯ ಮೂಲಕ ಭಾರತಕ್ಕೆ ಅಗತ್ಯ ವಸ್ತುಗಳ ಪೂರೈಕೆ ನಡೆಯುತ್ತಿದ್ದು, ಇತ್ತೀಚಿನ ಉದ್ವಿಗ್ನತೆಯಿಂದ ಸಾಗಣೆ ಕಷ್ಟಕರವಾಗಿದೆ. ಇದನ್ನರಿತು ಸರ್ಕಾರ ಪರ್ಯಾಯ ಮಾರ್ಗಗಳು ಮತ್ತು ಪೂರೈಕೆದಾರರೊಂದಿಗೆ ಸಂಪರ್ಕದಲ್ಲಿದ್ದು, ಸರಬರಾಜು ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳುತ್ತಿದೆ.
ಒಟ್ಟಾರೆ, ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಹಾಗೂ ರಸಗೊಬ್ಬರಗಳ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಸರ್ಕಾರ ಕಟ್ಟುನಿಟ್ಟಿನ ನಿಗಾ ವಹಿಸಿದೆ ಎಂದು ಪ್ರಧಾನಿ ಮೋದಿ ಸ್ಪಷ್ಟಪಡಿಸಿದರು.



