September 30, 2026
Wednesday, September 30, 2026
spot_img

ತಮಿಳುನಾಡು ಚುನಾವಣೆಗೆ ಎನ್​ಡಿಎ ಒಕ್ಕೂಟದಿಂದ ಸೀಟು ಹಂಚಿಕೆ ಫೈನಲ್: ಯಾರಿಗೆ ಎಷ್ಟು ಸ್ಥಾನ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ವಿಧಾನಸಭೆಯ ಚುನಾವಣೆ ಕಣ ರಂಗೇರುತ್ತಿದ್ದು, ಬಿಜೆಪಿ ಮತ್ತು ಎಐಎಡಿಎಂಕೆ ನೇತೃತ್ವದ ಎನ್​ಡಿಎ ಮೈತ್ರಿಕೂಟ ಇಂದು ತಮ್ಮ ಸೀಟು ಹಂಚಿಕೆ ಅಂತಿಮಗೊಳಿಸಿದ್ದಾರೆ.

ಚೆನ್ನೈನಲ್ಲಿ ಎಐಎಡಿಎಂಕೆ ಕಚೇರಿಯಲ್ಲಿ ಇಂದು ನಡೆದ ಮಾತುಕತೆಯಲ್ಲಿ ತಮಿಳುನಾಡು ಬಿಜೆಪಿ ಉಸ್ತುವಾರಿ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ ಪಳನಿಸ್ವಾಮಿ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಂಡಿದ್ದಾರೆ.

ಈ ಬಾರಿ ಎಐಎಡಿಎಂಕೆ 178 ಸ್ಥಾನದಲ್ಲಿ ಸ್ಪರ್ಧಿಸಿದರೆ, ಬಿಜೆಪಿ 27, ಪಿಎಂಕೆ 18 ಹಾಗೂ ಎಎಂಎಂಕೆ 11 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ಈ ವೇಳೆ ಮಾತನಾಡಿದ ಗೋಯಲ್, ಈ ಬಾರಿ ತಮಿಳುನಾಡಿನ ಜನರು ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟವನ್ನು ತಿರಸ್ಕರಿಸುತ್ತಾರೆ. ಎನ್​ಡಿಎ ಮೈತ್ರಿಕೂಟ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನಲ್ಲಿ ಎಪ್ರಿಲ್​ 23ರಂದು ಒಂದೇ ಹಂತದ ಮತದಾನ ನಡೆಯಲಿದ್ದು, ಮೇ 4ರಂದು ನಡೆದು ಫಲಿತಾಂಶ ಹೊರ ಬೀಳಲಿದೆ.

Must Read