ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಳೆಯ ಅಬ್ಬರ ಮುಂದುವರಿಯಲಿದ್ದು, IMD 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ, ಶಿವಮೊಗ್ಗ, ಧಾರವಾಡ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಇನ್ನು ಬೆಂಗಳೂರು ಸೇರಿದಂತೆ ಬೀದರ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯ ಸಾಧ್ಯತೆ ಇದೆ.
ಇದನ್ನೂ ಓದಿ:
ಕರಾವಳಿ ಭಾಗಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಮಾತ್ರ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ.
ಹವಾಮಾನ ತಜ್ಞರ ಪ್ರಕಾರ, ಅರಬ್ಬಿ ಸಮುದ್ರ ಭಾಗದಲ್ಲಿ ಪ್ರತ್ಯಾವರ್ತ ಮಾರುತದ ಪರಿಣಾಮ ಮುಂದುವರಿದಿದ್ದರೂ, ಬಂಗಾಳಕೊಲ್ಲಿಯ ಗಾಳಿಯ ದುರ್ಬಲತೆ ಮಳೆಯ ಪ್ರಮಾಣದ ಮೇಲೆ ಪರಿಣಾಮ ಬೀರುತ್ತಿದೆ. ಮಾರ್ಚ್ 24ರಿಂದ 27ರವರೆಗೆ ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಲಕ್ಷಣಗಳಿದ್ದು, ತಾಪಮಾನದಲ್ಲಿ ಸ್ವಲ್ಪ ಇಳಿಕೆಯಾಗುವ ಸಾಧ್ಯತೆ ಇದೆ.



