March 24, 2026
Tuesday, March 24, 2026
spot_img

ಕೊಲಂಬಿಯಾದಲ್ಲಿ ಸೇನಾ ವಿಮಾನ ಪತನ: 30ಕ್ಕೂ ಅಧಿಕ ಮಂದಿಯ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಅಮೆರಿಕದ ಕೊಲಂಬಿಯಾದಲ್ಲಿ ಭಾರೀ ವಿಮಾನ ದುರಂತ ಸಂಭವಿಸಿದ್ದು, ಅನೇಕ ಸೈನಿಕರು ಪ್ರಾಣ ಕಳೆದುಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಾಯುಪಡೆಯ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ಮೃತರ ಸಂಖ್ಯೆ ಏರಿಕೆಯಾಗುವ ಭೀತಿ ಇದೆ.

ಪ್ರಾಥಮಿಕ ಮಾಹಿತಿಯಂತೆ, 120ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದ ವಿಮಾನ ಪತನಗೊಂಡ ಪರಿಣಾಮ ಈಗಾಗಲೇ 30ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದು, ಕೆಲವರು ಕಾಣೆಯಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.

Lockheed C-130 Hercules ಮಾದರಿಯ ಈ ವಿಮಾನ ಪೆರುವಿನ ಗಡಿಗೆ ಸಮೀಪದ ಪೋರ್ಟೊ ಲೆಗುಯಿಜಾಮೊ ಪ್ರದೇಶದಿಂದ ಹಾರಾಟ ಆರಂಭಿಸಿತ್ತು. ಟೇಕ್ ಆಫ್ ಆದ ತಕ್ಷಣ ನಿಯಂತ್ರಣ ಕಳೆದುಕೊಂಡ ವಿಮಾನ ನೆಲಕ್ಕೆ ಅಪ್ಪಳಿಸಿ ಸ್ಫೋಟಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:

ಅಪಘಾತದ ಬಳಿಕ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅವಶೇಷಗಳು ಕಾಡು ಪ್ರದೇಶದಲ್ಲಿ ಹರಡಿಕೊಂಡಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದೃಶ್ಯಗಳಲ್ಲಿ ಅವಶೇಷಗಳಿಂದ ಹೊಗೆ ಬರುತ್ತಿರುವುದು ಕಂಡುಬಂದಿದೆ.

ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿ ಬದುಕುಳಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆಸಿವೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !