March 24, 2026
Tuesday, March 24, 2026
spot_img

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕನ ಪುತ್ರನ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರನ ಮೃತದೇಹ ಕಾರಿನಲ್ಲಿಯೇ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಧಾರವಾಡದ ರಾಮಾಪುರ ಬಳಿಯ ಕಾಡಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಪರಿಶೀಲನೆ ವೇಳೆ ಮೃತ ವ್ಯಕ್ತಿ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಎಂದು ಗುರುತಿಸಲಾಗಿದೆ.

ಇತ್ತ ದುಷ್ಕರ್ಮಿಗಳು ರಾಜು ಬೋಳಶೆಟ್ಟಿ ಅವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !