July 28, 2026
Tuesday, July 28, 2026
spot_img

ಹಿಂದು, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡಿದ್ದರೆ ಪರಿಶಿಷ್ಟ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಂದು, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಇತರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡಿದ್ದರೆ ಅಂತಹ ವ್ಯಕ್ತಿಯನ್ನು ಪರಿಶಿಷ್ಟ ಸಮುದಾಯಕ್ಕೆ ಸೇರಿದ ವ್ಯಕ್ತಿ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಆಂಧ್ರದಲ್ಲಿ ಆನಂದ್‌ ಎಂಬವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಪಾದ್ರಿಯಾಗಿದ್ದು, ಆ ವ್ಯಕ್ತಿಯ ಮೇಲೆ ಅಕ್ಕಲ ರಾಮಿರೆಡ್ಡಿ ಮತ್ತು ಇತರರು ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದರು. ಈ ಸಂಬಂಧ ಎಫ್‌ಐಆ‌ರ್ ದಾಖಲಾಗಿತ್ತು.

ಈ ಕುರಿತು 2025ರ ಮೇ ತಿಂಗಳಲ್ಲಿ ರಾಮಿರೆಡ್ಡಿ ಅವರು ಆಂಧ್ರಪ್ರದೇಶ ಹೈಕೋರ್ಟ್ ಮುಂದೆ ಪ್ರಕರಣ ರದ್ದುಗೊಳಿಸುವಂತೆ ಕೋರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ , ಈಗಾಗಲೇ ಆನಂದ್‌ ಅವರು ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರಗೊಂಡಿದ್ದು, ಹೀಗಾಗಿ ಎಸ್‌ಸಿ ಸ್ಥಾನಮಾನ ಸಂಬಂಧದ ಕಾಯ್ದೆಗಳು ಅನ್ವಯವಾಗುವುದಿಲ್ಲ ಎಂದು ಹೇಳಿ ಎಫ್‌ಐಆ‌ರ್ ಅನ್ನು ರದ್ದುಗೊಳಿಸಿದ್ದರು.

ಈ ತೀರ್ಪನ್ನು ಪ್ರಶ್ನಿಸಿ ಆನಂದ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಮನ್ಮೋಹನ್ ಅವರನ್ನೊಳಗೊಂಡ ನ್ಯಾಯಪೀಠ, ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದ್ದಿದ್ದು, ಈಗಾಗಲೇ ಬೇರೆ ಧರ್ಮವನ್ನು ಪಾಲಿಸುವವವರನ್ನು ಪರಿಶಿಷ್ಟ ಜಾತಿ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !