ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಜೊತೆಗಿನ ಮಾತುಕತೆ ಬಳಿಕ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಾಸ್ ಪಡೆದಿದ್ದಾರೆ .
ಇಂದು ಹೆಬ್ಬಾಳಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಈ ವೇಳೆ ಅವರು ತಮ್ಮ ವಿವಿಧ ಬೇಡಿಕೆಗಳಾದ ಗೌರವಧನ ಹೆಚ್ಚಳ, ಎಲ್‌ಕೆಜಿ, ಯುಕೆಜಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಬಗ್ಗೆ ಚರ್ಚೆ ನಡೆಸಿದರು.
ಈ ವೇಳೆ ಸಚಿವರು, ಹಂತ ಹಂತವಾಗಿ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ನೀಡಿದ್ದಾರೆ. ಹೀಗಾಗಿ ಪ್ರತಿಭಟನೆಯನ್ನು ವಾಪಾಸ್ ಪಡೆದಿದ್ದಾರೆ .



