May 10, 2026
Sunday, May 10, 2026
spot_img

ಆನ್‌ಲೈನ್ ಗೇಮ್‌ ಚಟಕ್ಕೆ ಬಿದ್ದು ಪ್ರಾಣ ಕಳೆದುಕೊಂಡ ಎಂಬಿಬಿಎಸ್ ವಿದ್ಯಾರ್ಥಿ

ಹೊಸದಿಗಂತ ವರದಿ, ಬೀದರ್:

ಆನ್‌ಲೈನ್ ಗೇಮ್‌ನ ಚಟಕ್ಕೆ ಬಿದ್ದು ಹಣ ಕಳೆದುಕೊಂಡ ಹಿನ್ನೆಲೆಯಲ್ಲಿ, ಬೀದರ್‌ನ ಬ್ರಿಮ್ಸ್ ವೈದ್ಯಕೀಯ ಕಾಲೇಜಿನ ವಸತಿ ನಿಲಯದಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬ್ರಿಮ್ಸ್)ಯಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಅನಿಷ್ಕಾರ್ ಚವ್ಹಾಣ್ (21) ಮೃತ ವಿದ್ಯಾರ್ಥಿಯಾಗಿದ್ದು.
ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾದ ನಿವಾಸಿಯಾಗಿದ್ದ ಮೃತ ವಿದ್ಯಾರ್ಥಿ.

ಈತ ಆನ್‌ಲೈನ್ ಗೇಮ್‌ನಲ್ಲಿ ಸುಮಾರು ₹80 ಸಾವಿರ ರೂಪಾಯಿ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕಾರಣದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿ ಬ್ರೀಮ್ಸ್ ಹಾಸ್ಟೆಲ್ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದಾಗಿ ಪ್ರಾಥಮಿಕ ತನಿಖೆಯಿಂದ ಪೋಲಿಸರಿಗೆ ಮಾಹಿತಿ ಸಿಕ್ಕಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ತಿಳಿದುಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯುವ ವಯಸ್ಸಿನ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಬ್ರಿಮ್ಸ್ ಬಳಿ ಮುಗಿಲು ಮುಟ್ಟಿತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !