March 24, 2026
Tuesday, March 24, 2026
spot_img

ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾರ್ಗಸೂಚಿ ಜಾರಿ ಯಾವಾಗ?: ಸಚಿವ ಮಧು ಬಂಗಾರಪ್ಪ ಏನಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

16 ವರ್ಷದೊಳಗಿನ ಶಾಲಾ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸುವ ಕುರಿತು ಈಗಾಗಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಈ ಸಂಬಂಧ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಅಧಿವೇಶನದಲ್ಲಿ ಈ ಕುರಿತು ಶಾಸಕ ಪ್ರತಾಪಸಿಂಹ ನಾಯಕ್‌ ಹಾಗೂ ಟಿ.ಎನ್‌. ಜವರಾಯಿಗೌಡ ಅವರು ಕೇಳಿದ ಪ್ರಶ್ನೆ ಉತ್ತರಿಸಿದ ಅವರು, ಈಗಾಗಲೇ ಶಾಲೆಗಳಲ್ಲಿ ಮಕ್ಕಳು ಮೊಬೆಲ್ ಬಳಕೆ ನಿಷೇಧವಿದ್ದು, ಆದರೆ ಹೊರಗಡೆ ಬಳಕೆ ಸಹಜವಾಗಿ ಇದೆ. ಹೀಗಾಗಿ ಈ ಕುರಿತು ಪೋಷಕರ ಅಭಿಪ್ರಾಯ ಕೂಡ ಮುಖ್ಯವಾಗಿದೆ ಎಂದು ತಿಳಿಸಿದರು.

ಈ ಕುರಿತು ಒಂದು ಉತ್ತಮ ಮಾರ್ಗ ಸೂಚಿ ಮುಖ್ಯವಾಗಿದೆ . ತಡವಾದರೂ ಒಂದು ಉತ್ತಮ ಮಾದರಿಯ ಮಾರ್ಗಸೂಚಿ ಪ್ರಕಟಿಸುತ್ತೇವೆ . ಅದಕ್ಕಾಗಿ ನಿಮ್ಮ ಎಲ್ಲರ ಸಲಹೆ ಕೂಡ ಮುಖ್ಯ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !