February 20, 2026
Friday, February 20, 2026
spot_img

ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ: ದೆಹಲಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದೋರ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನವು ಇಂದೋರ್‌ಗೆ ಹೊರಟಿತ್ತು. ಈ ವೇಳೆ ಫ್ಲೈಟ್‌ನ ಬಲ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ನಿಮಿಷ ವಿಮಾನ ಹಾರಾಟ ನಡೆಸಿದೆ. ಬೆಂಕಿ ಸೂಚನೆ ಸಿಕ್ಕ ಬೆನ್ನಲ್ಲೇ ವಿಮಾನ ದೆಹಲಿಗೆ ವಾಪಸ್‌ ಆಗಿದೆ.

A320 ನಿಯೋ ವಿಮಾನದ ಒಂದು ಎಂಜಿನ್ ಸ್ಥಗಿತಗೊಂಡಿದ್ದು, ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಏರ್ ಇಂಡಿಯಾ ತಿಳಿಸಿದೆ. 90 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !