September 29, 2026
Tuesday, September 29, 2026
spot_img

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ತುಸು ಏರುಪೇರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋನಿಯಾ ಗಾಂಧಿ ಅವರಿಗೆ ಸಣ್ಣ ಪ್ರಮಾಣದ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ರೂಟಿನ್ ಚೆಕಪ್‌ಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ. ಈ ಸಮಯದಲ್ಲಿ ಅವರ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರೂ ತಾಯಿಯ ಜೊತೆಗೇ ಇದ್ದಾರೆ.

ಸೋನಿಯಾ ಅವರ ಆರೋಗ್ಯ ಈಗ ಸದ್ಯಕ್ಕೆ ಸ್ಥಿರವಾಗಿದೆ. ಇದು ಕೇವಲ ಸಾಮಾನ್ಯ ವೈದ್ಯಕೀಯ ತಪಾಸಣೆ, ಗಾಬರಿ ಪಡುವ ಅಗತ್ಯವಿಲ್ಲ ಎಂದು ಪಕ್ಷದ ಕಾರ್ಯಕರ್ತರಿಗೆ ಮತ್ತು ಸಾರ್ವಜನಿಕರಿಗೆ ಧೈರ್ಯ ತುಂಬಲಾಗಿದೆ.

Must Read