ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಗೆ 24 ಗಂಟೆಗಳಲ್ಲಿ ಮತ್ತೆ ಬಾಂಬ್ ಬೆದರಿಕೆ ಈ ಮೇಲ್ ಬಂದಿದೆ.
ಮಂಗಳವಾರವಷ್ಟೇ ವಿಧಾನಸಭೆ ಸಂಕೀರ್ಣ ಮತ್ತು ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಇದೀಗ ಮತ್ತೆ ಸ್ಪೀಕರ್ ಕಚೇರಿಗೆ 16 ಆರ್‌ಡಿಎಕ್ಸ್ ಐಇಡಿಗಳನ್ನು ಇರಿಸಲಾಗಿದೆ ಎಂದು ಬೆದರಿಕೆ ಇಮೇಲ್ ಬಂದಿದೆ .
ಈ ಬೆನ್ನಲ್ಲೇ ಭದ್ರತಾ ಪಡೆ ಅಲರ್ಟ್ ಆಗಿದ್ದು, ವಿಧಾನ ಸಭೆ ಸುತ್ತಮುತ್ತ ಬಾಂಬ್ ನಿಷ್ಕ್ರಿಯ ದಳಗಳು, ಶ್ವಾನ ದಳಗಳು ಹಾಗೂ ಪೊಲೀಸರು ತಪಾಸಣೆ ನಡೆಸಿದ್ದಾರೆ. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



