May 12, 2026
Tuesday, May 12, 2026
spot_img

ವಂದೇ ಮಾತರಂ ಸುತ್ತೋಲೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಗೃಹ ಸಚಿವಾಲಯ ಇತ್ತೀಚೆಗೆ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ಸುತ್ತೋಲೆಯನ್ನು ಹೊರಡಿಸಿದ್ದು, ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಮುಹಮ್ಮದ್ ಸಯೀದ್ ನೂರಿ ಎಂಬಾತ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಂಚೋಲಿ ಅವರಿದ್ದ ಪೀಠವು, ಅರ್ಜಿಯು ಅನಿರೀಕ್ಷಿತವಾಗಿದ್ದು, ಇಲ್ಲಿ ತಾರತಮ್ಯದ ಆತಂಕ ಎದ್ದು ಕಾಣುತ್ತಿದ್ದು, ಒಂದು ವೇಳೆ ನಿಮಗೆ ಆ ರೀತಿಯ ಭಾವನೆ ಉಂಟಾದಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಬಹುವುದು ಎಂದು ಹೇಳಿದೆ.

ಈ ಸುತ್ತೋಲೆ ಕೇವಲ ಸಲಹೆ ಮಾತ್ರ. ಯಾರಿಗೂ ಪಾಲಿಸಲೇ ಬೇಕು ಎಂದು ಒತ್ತಡವಿಲ್ಲ. ಹಾಗಾಗಿ ಇದು ಯಾವುದೇ ರೀತಿಯ ಕಾನೂನುಬಾಹಿರ ಕೃತ್ಯವಲ್ಲ ಎಂದು ಹೇಳಿದೆ.

ಇತ್ತೀಚೆಗೆ ಕೇಂದ್ರ ಗೃಹ ಸಚಿವಾಲಯ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ, ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ಹಾಡುವುದನ್ನು ಕಡ್ಡಾಯಗೊಳಿಸಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !