March 25, 2026
Wednesday, March 25, 2026
spot_img

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯ ಸ್ಥಿತಿ ಹೇಗಿದೆ? ವೈದ್ಯರು ಏನು ಹೇಳಿದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಂಗಳವಾರ ತಡರಾತ್ರಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ದೀಢಿರ್ ಏರುಪೇರು ಉಂಟಾಗಿದ್ದು, ಈ ಹಿನ್ನೆಲೆ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ವೈದ್ಯರ ತಂಡದ ನಿಗಾದಲ್ಲಿದ್ದು, ಯಾವುದೇ ರೀತಿಯ ಆತಂಕ ಇಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ್ದ ಸರ್ ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ ಡಾ ಅಜಯ್ ಸ್ವರೂಪ್, ಸದ್ಯ ಆರೋಗ್ಯದ ಸ್ಥಿತಿಯನ್ನು ಗಮನಿಸಲಾಗುತ್ತಿದೆ. ಅಂಟಿಬಯೋಟಿಕ್ ಔಷಧಿಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸದ್ಯ ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ವರದಿಗಳನ್ನು ಪರಿಶೀಲಿಸಿ ವೈದ್ಯರು ಮುಂದಿನ ಚಿಕಿತ್ಸೆ ಆರಂಭಿಸಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !