ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ನಿರ್ಧಾರವಾಗಿ, ಮೈಸೂರು–ಕೆಎಸ್‌ಆರ್ ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ಒಡೆಯರ್ ಎಕ್ಸ್‌ಪ್ರೆಸ್ ರೈಲಿಗೆ ರಾಮನಗರದಲ್ಲಿ ನಿಲುಗಡೆ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಈ ನಿರ್ಧಾರಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಪ್ರಯತ್ನ ಕಾರಣವಾಗಿದೆ. ಈ ಬಗ್ಗೆ ರೈಲ್ವೆ ಸಚಿವಾಲಯ ಅಧಿಕೃತ ಆದೇಶ ಹೊರಡಿಸಿದೆ.
ಇದನ್ನೂ ಓದಿ:
ರಾಮನಗರದಿಂದ ಪ್ರತಿದಿನ ಸಾವಿರಾರು ಮಂದಿ ಉದ್ಯೋಗ, ಶಿಕ್ಷಣ ಮತ್ತು ವ್ಯಾಪಾರ ಉದ್ದೇಶಕ್ಕಾಗಿ ಬೆಂಗಳೂರಿಗೆ ಪ್ರಯಾಣಿಸುತ್ತಾರೆ. ವಿಶೇಷವಾಗಿ ಗಾರ್ಮೆಂಟ್ ಕ್ಷೇತ್ರದಲ್ಲಿ ಕೆಲಸ ಮಾಡುವ ಮಹಿಳೆಯರು ಹಾಗೂ ವಿದ್ಯಾರ್ಥಿಗಳಿಗೆ ಈ ನಿಲುಗಡೆ ಹೆಚ್ಚು ಉಪಯುಕ್ತವಾಗಲಿದೆ.
ಈ ಬೇಡಿಕೆ ಬಹುಕಾಲದಿಂದ ಮುಂದಿಟ್ಟಿದ್ದ ಜನರಿಗೆ ಇದೀಗ ನೆಮ್ಮದಿ ಸಿಕ್ಕಿದ್ದು, ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು–ಮೈಸೂರು ಮಾರ್ಗ ರಾಜ್ಯದ ಅತ್ಯಂತ ಬ್ಯುಸಿ ರೈಲು ಮಾರ್ಗಗಳಲ್ಲಿ ಒಂದಾಗಿದ್ದು, ಈ ಕ್ರಮದಿಂದ ಸಂಚಾರ ಇನ್ನಷ್ಟು ಸುಗಮವಾಗಲಿದೆ.
ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರ, ರಾಮನಗರ ಜಿಲ್ಲೆಯ ಪ್ರಯಾಣಿಕರಿಗೆ ದೊಡ್ಡ ಮಟ್ಟದ ಅನುಕೂಲ ಒದಗಿಸುವ ನಿರೀಕ್ಷೆ ಇದೆ.



