March 26, 2026
Thursday, March 26, 2026
spot_img

SSLC ಮಕ್ಕಳಿಗೆ ಹಿಂದಿ ಎಕ್ಸಾಮ್ ಮಾಡಿದ್ರೆ ಹುಷಾರ್! ಪರೀಕ್ಷೆ ರದ್ದು ಮಾಡೋಕೆ ಕನ್ನಡಪರ ಸಂಘಟನೆಗಳ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ವರ್ಷದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಕುರಿತು ರಾಜ್ಯದಲ್ಲಿ ವಿವಾದ ತೀವ್ರಗೊಂಡಿದೆ. ವಿವಿಧ ಕನ್ನಡಪರ ಸಂಘಟನೆಗಳು ಪರೀಕ್ಷೆಯನ್ನು ರದ್ದು ಮಾಡುವಂತೆ ಆಗ್ರಹಿಸಿದ್ದು, ಸರ್ಕಾರದ ಮೇಲೆ ಒತ್ತಡ ಹೆಚ್ಚಿಸಿದೆ.

ಮಾರ್ಚ್‌ 30ರಂದು ನಡೆಯಲಿರುವ ಹಿಂದಿ ಪರೀಕ್ಷೆಯ ದಿನವೇ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕುವುದಾಗಿ ಕೆಲವು ಸಂಘಟನೆಗಳು ಎಚ್ಚರಿಕೆ ನೀಡಿವೆ. ಇದರ ಹಿನ್ನೆಲೆ, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಕುರಿತು ಎಲ್ಲಾ ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಯ ಸಹಕಾರ ಕೋರಲಾಗಿದೆ. ಪ್ರತಿ ಕೇಂದ್ರದಲ್ಲೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ:

ಹಿಂದಿ ಪರೀಕ್ಷೆ ತೃತೀಯ ಭಾಷಾ ವಿಷಯವಾಗಿದ್ದು, ಅದರ ವಿರುದ್ಧ ಕೆಲ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸುತ್ತಿವೆ. ಇದರ ಪರಿಣಾಮವಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸರ್ಕಾರ ಮತ್ತು ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಪರೀಕ್ಷೆಯ ಸುಗಮ ನಿರ್ವಹಣೆಗೆ ಆದ್ಯತೆ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದೆ. ಯಾವುದೇ ಅಡ್ಡಿಪಡಿಗಳು ಆಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !