July 28, 2026
Tuesday, July 28, 2026
spot_img

ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಸಿಎಂಗಳ ಜೊತೆ ಪ್ರಧಾನಿ ಮೋದಿ ಹೈವೋಲ್ಟೇಜ್ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ, ಭಾರತದ ಭದ್ರತೆ ಮತ್ತು ಸಿದ್ಧತೆಗಳ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಲಿದ್ದಾರೆ.

ಸಂಘರ್ಷದಿಂದ ಎದುರಾಗಬಹುದಾದ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ದೇಶದ ಒಟ್ಟಾರೆ ಸಿದ್ಧತೆ ಮತ್ತು ಕಾರ್ಯಯೋಜನೆಗಳ ಬಗ್ಗೆ ಪ್ರಧಾನಿ ಮಾಹಿತಿ ಪಡೆಯಲಿದ್ದಾರೆ.

ಏಪ್ರಿಲ್‌ನಲ್ಲಿ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಆ ರಾಜ್ಯಗಳ ಸಿಎಂಗಳು ಸಭೆಯಲ್ಲಿ ಭಾಗವಹಿಸುತ್ತಿಲ್ಲ. ಬದಲಿಗೆ ಆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲು ನಿರ್ಧರಿಸಲಾಗಿದೆ.

ಈ ಮಹತ್ವದ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಳ್ಳುತ್ತಾರೆಯೇ ಎಂಬುದು ಸದ್ಯ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಕಳೆದ ಭಾನುವಾರ ನಡೆದ ಭದ್ರತಾ ಸಂಪುಟ ಸಮಿತಿ ಸಭೆಯಲ್ಲಿ ಪ್ರಧಾನಿಯವರು, ಸಂಘರ್ಷ ತೀವ್ರಗೊಂಡರೆ ವಿದೇಶಗಳಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ರಕ್ಷಿಸುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !