ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಗತಿಕ ಮಟ್ಟದಲ್ಲಿ ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ವಾತಾವರಣ ಹಾಗೂ ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟಿನಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಳಿತ ಕಾಣುತ್ತಿದೆ. ಇದರಿಂದ ಭಾರತೀಯ ತೈಲ ಕಂಪನಿಗಳು ಎದುರಿಸುತ್ತಿರುವ ಆರ್ಥಿಕ ಹೊರೆಯನ್ನು ತಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 13 ರೂಪಾಯಿಯಿಂದ 3 ರೂಪಾಯಿಗೆ ಇಳಿಕೆ ಮಾಡಲಾಗಿದ್ದು, ಡೀಸೆಲ್ ಮೇಲಿನ ಸುಂಕವನ್ನು 10 ರೂಪಾಯಿಯಿಂದ ಶೂನ್ಯಕ್ಕೆ (0 ರೂ.) ಇಳಿಸಲಾಗಿದೆ.
ಆದರೆ, ಈ ಸುಂಕ ಕಡಿತದ ಲಾಭವನ್ನು ತೈಲ ಕಂಪನಿಗಳ ನಷ್ಟ ಸರಿದೂಗಿಸಲು ಬಳಸಿಕೊಳ್ಳಲಾಗುತ್ತದೆಯೇ ಹೊರತು, ಸಾಮಾನ್ಯ ಗ್ರಾಹಕರಿಗೆ ಪೆಟ್ರೋಲ್-ಡೀಸೆಲ್ ದರದಲ್ಲಿ ಯಾವುದೇ ನೇರ ಇಳಿಕೆಯಾಗುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.



