July 4, 2026
Saturday, July 4, 2026
spot_img

ಹಾಜಬ್ಬ, ಸೂರಿಕುಮೇರು, ಪಡುಮಲೆ ಮುಕುಟಕ್ಕೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ ಗರಿ

ಹೊಸದಿಗಂತ ಮಂಗಳೂರು:

ಮಂಗಳೂರು ವಿಶ್ವವಿದ್ಯಾನಿಲಯದ 44ನೆಯ ವಾರ್ಷಿಕ ಘಟಿಕೋತ್ಸವ ನಾಳೆ ಪೂರ್ವಾಹ್ನ 11 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.


ಮಂಗಳೂರಿನಲ್ಲಿಂದು ಮಾತನಾಡಿದ ಅವರು, ಈ ಬಾರಿಯ ಘಟಿಕೋತ್ಸವದಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ, ದೈವನರ್ತಕ ರವೀಶ್ ಪಡುಮಲೆ ಇವರಿಗೆ ಗೌರವ ಡಾಕ್ಟರೇಟ್ ಪ್ರದಾನಿಸಲಾಗುವುದು. ಅಲ್ಲದೆ ಮರಣೋತ್ತರವಾಗಿ ಇತ್ತೀಚೆಗೆ ಅಗಲಿದ ಯಕ್ಷಗಾನ ರಂಗದ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ ಅವರಿಗೆ ಏ.13ರಂದು ಅವರ ಮನೆಗೆ ತೆರಳಿ ಪ್ರದಾನಿಸಲಾಗುವುದು. ಅವರ ಪುತ್ರ ಗೌರವ ಸ್ವೀಕರಿಸಲಿದ್ದಾರೆ ಎಂದರು.

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಕುಲಪತಿ ತಿಳಿಸಿದರು.

ಘಟಿಕೋತ್ಸವದಲ್ಲಿ ಒಟ್ಟು 56 ಚಿನ್ನದ ಪದಕ ಮತ್ತು 57 ನಗದು ಬಹುಮಾನಗಳಿದ್ದು, ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಒಟ್ಟು 146 ರ್‍ಯಾಂಕ್‌ಗಳಲ್ಲಿ ಪ್ರಥಮ ರ್‍ಯಾಂಕ್ ಪಡೆದ 69 ವಿದ್ಯಾರ್ಥಿಗಳಿಗೆ ರ್‍ಯಾಂಕ್ ಪ್ರಮಾಣಪತ್ರ ನೀಡಲಾವುಗುವುದು. ಒಟ್ಟು 162 ಮಂದಿ ಪಿಎಚ್‌ಡಿ ಪದವಿ ಪಡೆಯಲಿದ್ದಾರೆ ಎಂದು ಪ್ರೊ.ಪಿ.ಎಲ್.ಧರ್ಮ ವಿವರ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !