June 5, 2026
Friday, June 5, 2026
spot_img

ದಾವಣೆಗೆರೆ, ಬಾಗಲಕೋಟೆ ಬೈ ಎಲೆಕ್ಷನ್: ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ನೇಮಕಾತಿ ಪರೀಕ್ಷೆ ಮುಂದೂಡಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾವಣೆಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನ ಸಭಾ ಕ್ಷೇತ್ರಗಳಿಗೆ ಏ.9ರಂದು ಉಪಚುನಾವಣೆ ನಡೆಯಲಿರುವ ಹಿನ್ನೆಲೆ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಖಾಲಿ ಹುದ್ದೆಗಳ ನೇಮಕಾತಿಗೆ ನಿಗದಿಯಾಗಿದ್ದ ಪರೀಕ್ಷೆ ದಿನಾಂಕ ಮುಂದೂಡಲಾಗಿದೆ.

ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದ್ದು, ಉಪಚುನಾವಣೆಯ ಹಿನ್ನೆಲೆ ನೇಮಕಾತಿ ಪರೀಕ್ಷೆ ಏ.10ಕ್ಕೆ ಮುಂದೂಡಿಕೆಯಾಗಿದೆ ಎಂದು ತಿಳಿಸಿದೆ.

ಬೆಂಗಳೂರು ಮತ್ತು ಧಾರವಾಡ ಕೇಂದ್ರಗಳಲ್ಲಿ ಒಟ್ಟು‌ 33 ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ಪ್ರವೇಶ ಪತ್ರ ಶೀಘ್ರದಲ್ಲೇ ಬಿಡುಗಡೆ ಮಾಡುತ್ತಿದ್ದು, ಅಭ್ಯರ್ಥಿಗಳು ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಪರೀಕ್ಷೆಗೆ ಹಾಜರಾಗಬೇಕು ಎಂದು ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !