March 28, 2026
Saturday, March 28, 2026
spot_img

ಗದ್ದೆಯೊಳಗಿನ ಕೆರೆಗೆ ಬಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು, ಆಕಸ್ಮಿಕವಾಗಿ ಕಾಲು ಜಾರಿದ!

ಹೊಸದಿಗಂತ ವರದಿ ಶಿವಮೊಗ್ಗ:

ರಿಪ್ಪನ್ ಪೇಟೆ ಸಮೀಪದ ಬರುವೆ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಗದ್ದೆಯೊಳಗಿನ ಕೆರೆಗೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದ SSLC ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಮದೀನಾ ಕಾಲೋನಿ ನಿವಾಸಿ ಮಹಮ್ಮದ್ ತಮೀಮ್ ಬಿನ್ ತಾಹಿರ್ ಹುಸೇನ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಚೌಡೇಶ್ವರಿ ಬೀದಿಯಲ್ಲಿ ಟ್ಯೂಷನ್‌ಗೆ ತೆರಳಿದ್ದ ಆತ, ಬಳಿಕ ಸ್ನೇಹಿತರೊಂದಿಗೆ ಬರುವೆ ಗ್ರಾಮದ ದಿಬ್ಬದತ್ತ ತೆರಳಿದ್ದಾನೆ. ಈ ವೇಳೆ ಗದ್ದೆಯೊಳಗಿನ ಕೆರೆಯ ಮೇಲೆ ನಡೆಯುತ್ತಿದ್ದಾಗ ಕಾಲುಜಾರಿ ನೀರಿಗೆ ಬಿದ್ದು ದುರ್ಘಟನೆ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಂತರ ಸ್ಥಳೀಯರು ಯುವಕನನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಯುವಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಧೃಡಪಡಿಸಿದ್ದಾರೆ.

ಮೃತ ವಿದ್ಯಾರ್ಥಿ ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದು, ಮೂರು ಪಬ್ಲಿಕ್ ಪರೀಕ್ಷೆಗಳನ್ನೂ ಬರೆದಿದ್ದ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !