ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಅವಧಿ ಮೀರಿದ ಔಷಧಗಳು ಸಿಕ್ಕಿವೆ.
ಇಷ್ಟೇ ಅಲ್ಲದೆ ರೋಗಿಗಳ ದಾಖಲೆಗಳನ್ನು ನೀಡಲು ಆಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದಾರೆ, ಆಂಬುಲೆನ್ಸ್ ಮಾಫಿಯಾ ಕೂಡ ಬೆಳಕಿಗೆ ಬಂದಿದೆ.
ವೆಂಟಿಲೇಟರ್ ದೋಷದಿಂದ ಹಾಸಿಗೆಗಳು ಬಳಸಿಲ್ಲ ಎಂದು ಹೇಳಿರುವುದು ಆಸ್ಪತ್ರೆಯ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಹೇಳಿದ್ದಾರೆ. ಪ್ರಕರಣದ ವರದಿಯನ್ನು ಮುಖ್ಯ ಕಾರ್ಯದರ್ಶಿ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ಕಳುಹಿಸಲು ಸೂಚಿಸಲಾಗಿದ್ದು, ವಿಚಾರಣೆಯನ್ನು ಏಪ್ರಿಲ್ 27ಕ್ಕೆ ಮುಂದೂಡಲಾಗಿದೆ.
ಇನ್ನಷ್ಟು ಮಾಹಿರಿ ನಿರೀಕ್ಷಿಸಲಾಗಿದೆ..



