July 28, 2026
Tuesday, July 28, 2026
spot_img

ಚುನಾವಣಾ ಅಖಾಡಕ್ಕೆ 60 ಕ್ಕೂ ಹೆಚ್ಚು ಹೊಸ ಮುಖ: ಗೆಲುವಿಗೆ ಸಿಎಂ ಎಂ.ಕೆ. ಸ್ಟಾಲಿನ್ ರಣತಂತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಅಧಿಕಾರ ಗದ್ದುಗೆ ಏರಲು ಪಣತೊಟ್ಟಿರುವ ಡಿಎಂಕೆ, ಈ ಬಾರಿಯ ಚುನಾವಣೆಯಲ್ಲಿ ಹೊಸ ಕಾರ್ಯತಂತ್ರ ರೂಪಿಸಿದ್ದು, ಈ ಬಾರಿ ಅತೀ ಹೆಚ್ಚು ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದೆ.

ಶನಿವಾರ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು 164 ಅಭ್ಯರ್ಥಿಗಳ ಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ 60ಕ್ಕೂ ಹೆಚ್ಚು ಹೊಸ ಅಭ್ಯರ್ಥಿಗಳಿಗೆ ಸ್ಥಾನ ನೀಡಲಾಗಿದ್ದು, ಹೊಸ ಮುಖಗಳನ್ನು ಈ ಬಾರಿಯ ಚುನಾವಣಾ ಅಖಾಡಕ್ಕಿಳಿಸುತ್ತಿರುವುದು ಸ್ಪಷ್ಟವಾಗಿದೆ.

ಕೊಳತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಟಾಲಿನ್ ಅವರೇ ಮತ್ತೊಮ್ಮೆ ಅಗ್ನಿ ಪರೀಕ್ಷೆಗೆ ಇಳಿಯಲಿದ್ದು, ಮಗ, ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಚೆಪಾಕ್ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.

ಇತ್ತೀಚೆಗೆ ಡಿಎಂಕೆ ಸೇರಿರುವ ಓ. ಪನ್ನೀರ್‌ಸೆಲ್ವಂ ಅವರು ಬೋಡಿನಾಯಕನೂರಿನಿಂದ ಸ್ಪರ್ಧಿಸಿದರೆ, ಮಾಜಿ ಸಚಿವ ಸೆಂಥಿಲ್ ಬಾಲಾಜಿ ಅವರು ಕೊಯಮತ್ತೂರು ದಕ್ಷಿಣದಿಂದ ಸ್ಪರ್ಧಿಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !