ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಕೆಟ್ ಪ್ರಿಯರ ಬಹುದಿನಗಳ ಕಾಯುವಿಕೆಗೆ ತೆರೆ ಬಿದ್ದಿದ್ದು, ಐಪಿಎಲ್ ಹಬ್ಬ ಅದ್ಧೂರಿಯಾಗಿ ಆರಂಭಗೊಂಡಿದೆ. ಮೊದಲ ಹಂತದ ರೋಚಕ ಕಾದಾಟದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದರ್ ಅದೃಷ್ಟ ಕೈ ಹಿಡಿದಿದೆ.
ಟಾಸ್ ಗೆದ್ದ ಪಾಟಿದರ್ ಯಾವುದೇ ಹಿಂಜರಿಕೆಯಿಲ್ಲದೆ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ, ಸನ್ ರೈಸರ್ಸ್ ಹೈದರಾಬಾದ್ ತಂಡ ಮೊದಲು ಬ್ಯಾಟಿಂಗ್ ಮಾಡುವ ಮೂಲಕ ಬೃಹತ್ ಮೊತ್ತವನ್ನು ಪೇರಿಸುವ ಸವಾಲನ್ನು ಎದುರಿಸಲಿದೆ.
ಬೆಂಗಳೂರಿನ ಅಭಿಮಾನಿಗಳು ತಮ್ಮ ನೆಚ್ಚಿನ ತಂಡದ ಬೌಲಿಂಗ್ ಪ್ರದರ್ಶನವನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.



