March 28, 2026
Saturday, March 28, 2026
spot_img

ಸೌದಿ ಅರೇಬಿಯಾ ಯುವರಾಜನ ಜೊತೆ ಪ್ರಧಾನಿ ಮೋದಿ ಮಾತುಕತೆ: ಹಡಗು ಮಾರ್ಗಗಳ ಸುರಕ್ಷತೆ ಕುರಿತು ಮಹತ್ವದ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ತಾರಕ್ಕೇರಿದ್ದು, ಇದರ ನಡುವೆ ಪ್ರಧಾನಿ ಮೋದಿ ಅವರು ಇಂದು ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್​​​​ರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಉಭಯ ನಾಯಕರು ಯುದ್ಧದ ಪರಿಸ್ಥಿತಿ, ಇಂಧನ ಪೂರೈಕೆ ಸಮಯ ಎದುರಾಗುವ ಸವಾಲುಗಳ ಕುರಿತು ಮಾತನಾಡಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡ ಪ್ರಧಾನಿ ಮೋದಿ, ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತನಾಡಿದ್ದು, ಈ ವೇಳೆ ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಚರ್ಚಿಸಿದ್ದೇವು. ಈ ಕ್ಷಣ ಭಾರತವು ಪ್ರಾದೇಶಿಕ ಇಂಧನ ಮೂಲಸೌಕರ್ಯಗಳ ಮೇಲೆ ನಡೆಯುತ್ತಿರುವ ದಾಳಿಯನ್ನು ಕಟುವಾಗಿ ಖಂಡಿಸಿದ್ದು, ಹಡಗು ಮಾರ್ಗಗಳ ರಕ್ಷಣೆ ಹಾಗು ಸಂವಹನ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳುವ ಅಗತ್ಯತೆಯನ್ನು ನಾವು ಒಪ್ಪಿಕೊಂಡಿದ್ದೇವೆ.  ಜೊತೆಗೆ ಸೌದಿ ಅರೇಬಿಯಾದಲ್ಲಿನ ಭಾರತೀಯರ ಶ್ರೇಯೋಭಿವೃದ್ಧಿಗೆ ನಿರಂತರ ಬೆಂಬಲ ನೀಡಿರುವುದಕ್ಕೆ ಧನ್ಯವಾದ ಅರ್ಪಿಸಿದೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !