Wednesday, September 3, 2025

ACCIDENT | ತಲೆ ಮೇಲೆ ಕ್ಯಾಂಟರ್‌ ಹರಿದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದ್ವಿಚಕ್ರ ವಾಹನ ಸವಾರನ ತಲೆಯ ಮೇಲೆ‌ ಕ್ಯಾಂಟರ್ ಲಾರಿ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ ಬಳಿ ನಡೆದಿದೆ.

ರಾಜೀವ್ ಗಾಂಧಿ ಬಡವಾಣೆಯ ಪ್ರದೀಪ್ (35) ಮೃತ ದುರ್ದೈವಿ. ದ್ವಿಚಕ್ರ ವಾಹನ ಸವಾರ ಟಿ.ಬಿ ವೃತ್ತದಿಂದ ಪಾಲನಜೋಗಿಹಳ್ಳಿ ಕಡೆಗೆ ರಾಂಗ್ ರೂಟ್ ನಲ್ಲಿ ಹೋಗುತ್ತಿದ್ದಾಗ ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದ ಕಡೆಗೆ ಕಾರೊಂದು ವೇಗವಾಗಿ ಬಂದು ಕ್ಯಾಂಟರ್ ಲಾರಿಯನ್ನು ಓವರ್ ಟೇಕ್ ಮಾಡುವ ವೇಳೆ ಬೈಕ್ ಗೆ ಡಿಕ್ಕಿ ಹೊಡೆದಿದೆ. 

ಕಾರಿಗೆ ಟಚ್ ಆಗಿ ಲಾರಿಯ ಚಕ್ರದ ಅಡಿಗೆ ದ್ವಿಚಕ್ರ ವಾಹನ ಸವಾರ ಬಿದ್ದಿದ್ದಾನೆ. ಬಿದ್ದ ಕೂಡಲೇ ಲಾರಿಯ ಚಕ್ರ ಬೈಕ್ ಸವಾರನ ತಲೆಯ ಮೇಲೆ ಹರಿದ ಪರಿಣಾಮ‌ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರಸ್ತೆಯ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಮೆದುಳು ಬಿದ್ದಿದೆ. 

ದೊಡ್ಡಬಳ್ಳಾಪುರ ಶವಾಗರಕ್ಕೆ ಮೃತ ದೇಹ ರವಾನೆ ಮಾಡಿ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಕ್ಯಾಂಟರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ