March 28, 2026
Saturday, March 28, 2026
spot_img

IPL 2026 | ಮೊದಲ ಮ್ಯಾಚ್ ನಲ್ಲಿ ಕಿಶನ್ ಭರ್ಜರಿ ಬ್ಯಾಟಿಂಗ್: ಆರ್​ಸಿಬಿಗೆ ಬಿಗ್ ಟಾರ್ಗೆಟ್ ನೀಡಿದ ಹೈದರಾಬಾದ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಬ್ಯಾಟಿಂಗ್ ನಡೆಸಿದ್ದು, ನಾಯಕ ಇಶಾನ್ ಕಿಶನ್ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್​ ಗಳಿಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಬಿಗ್ ಟಾರ್ಗೆಟ್ ನೀಡಿದೆ.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್​ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಆರ್​ಸಿಬಿ ಪರ ಜೇಕಬ್ ಡಫಿ ಪವರ್​ ಪ್ಲೇನಲ್ಲೇ ಮೂರು ವಿಕೆಟ್ ಪಡೆದು ಶಾಕ್ ನೀಡಿದರು. ಅಭಿಷೇಕ್ ಶರ್ಮಾ 7, ಟ್ರಾವಿಸ್ ಹೆಡ್ 11 ಹಾಗೂ ನಿತೀಶ್ ಕುಮಾರ್​ ರೆಡ್ಡಿ ಯನ್ನು ಪೆವಿಲಿಯನ್ ಗೆ ಕಳುಹಿಸಿದರು.

ಬಳಿಕ ಒಂದಾದ ಇಶಾನ್ ಕಿಶನ್ ಹಾಗೂ ಹೆನ್ರಿಚ್ ಕ್ಲಾಸೆನ್ 97 ರನ್​ಗಳಿಸಿದರು. ಕ್ಲಾಸೆನ್ ​ 31 ರನ್​ಗಳಿಸಿ ಸಾಲ್ಟ್ ಹಿಡಿದ ಅದ್ಭುತ ಕ್ಯಾಚ್​ಗೆ ಬಲಿಯಾದರು. ನಂತರ ಬಂದ ಸಲೀಲ್ ಅರೋರಾ 9 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಒಂದೆಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೆ ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ನಡೆಸಿದ ನಾಯಕ ಇಶಾನ್ ಕಿಶನ್ 38 ಎಸೆತಗಳಲ್ಲಿ 8 ಬೌಂಡರಿ, 5 ಸಿಕ್ಸರ್​ಗಳ ಸಹಿತ 80 ರನ್​ಗಳಿಸಿದರು.

ಕೊನೆಯಲ್ಲಿ ಅನಿಕೇತ್ ವರ್ಮಾ 43 ರನ್​ಗಳಿಸಿ ತಂಡದ ಮೊತ್ತವನ್ನ 200ರ ಗಡಿ ದಾಟಿಸಿದರು.

ಆರ್​ಸಿಬಿ ಪರ ಜೇಕಬ್ ಡಫಿ 3, ರೊಮ್ಯಾರಿಯೋ ಶೆಫರ್ಡ್ 3, ಅಭಿನಂದನ್ ಸಿಂಗ್, ಸುಯಾಶ್ ಶರ್ಮಾ ಹಾಗೂ ಭುವನೇಶ್ವರ್ ಕುಮಾರ್ ತಲಾ ಒಂದು ವಿಕೆಟ್ ಪಡೆದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !