ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಗಲ್ಫ್ ಪ್ರದೇಶದಲ್ಲಿನ ಅಮೆರಿಕದ ಸೈನಿಕ ನೆಲೆಗಳ ಮೇಲೂ ದಾಳಿ ನಡೆದಿರುವುದಾಗಿ ವರದಿಯಾಗಿದೆ.
ಈ ಬೆಳವಣಿಗೆಯ ನಡುವೆ ಅಮೆರಿಕ ತನ್ನ ಸೈನಿಕ ಸನ್ನದ್ಧತೆಯನ್ನು ಹೆಚ್ಚಿಸಿದ್ದು, USS Tripoli ಯುದ್ಧನೌಕೆ ಯುಎಸ್ ಸೆಂಟ್ರಲ್ ಕಮಾಂಡ್ ಪ್ರದೇಶಕ್ಕೆ ಕಳುಹಿಸಿದೆ. ಸುಮಾರು 3,500 ನೌಕಾಪಡೆಯೊಂದಿಗೆ ಬಂದಿರುವ ಈ ಹಡಗು ಆಧುನಿಕ ಯುದ್ಧ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳನ್ನು ಹೊತ್ತುಕೊಂಡಿದೆ.
ಇದನ್ನೂ ಓದಿ:
ಇರಾನ್ ಹಾರ್ಮುಜ್ ಜಲಸಂಧಿಯನ್ನು ನಿಯಂತ್ರಣದಲ್ಲಿಟ್ಟುಕೊಂಡಿದ್ದು, ಅಮೆರಿಕ, ಇಸ್ರೇಲ್ಗೆ ಮುಚ್ಚಿದ್ದು, ಕೆಲವು ರಾಷ್ಟ್ರಗಳಿಗೆ ಮಾತ್ರ ತೈಲ ಸಾಗಣೆ ಅವಕಾಶ ನೀಡಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಸಂಕೀರ್ಣಗೊಳಿಸಿದೆ. ಹಾರ್ಮುಜ್ ಜಲಸಂಧಿ ಜಾಗತಿಕ ತೈಲ ಸಾಗಣೆಗೆ ಪ್ರಮುಖ ಮಾರ್ಗವಾಗಿದ್ದು, ಇಲ್ಲಿ ಉದ್ವಿಗ್ನತೆ ಹೆಚ್ಚಳವು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ. ಜೊತೆಗೆ ಇದೀಗ ಹಾರ್ಮುಜ್ ಜಲಸಂಧಿ, ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ ಮಾಡುವ ಭೀತಿ ಕೂಡ ಎದುರಾಗಿದೆ.
ಒಟ್ಟಿನಲ್ಲಿ, ಈ ಸಂಘರ್ಷ ಇನ್ನಷ್ಟು ವಿಸ್ತಾರವಾಗುವ ಭೀತಿ ಇದ್ದು, ಜಾಗತಿಕ ಭದ್ರತೆ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇದೆ.



