March 29, 2026
Sunday, March 29, 2026
spot_img

IPL2026 | ವಾಂಖೆಡೆಯಲ್ಲಿ ಬಿಗ್ ಮ್ಯಾಚ್: ಕೋಲ್ಕತ್ತಾ ವಿರುದ್ಧ ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಮುಂಬೈ ತಂಡದ ಪ್ಲೇಯಿಂಗ್ 11 ನಲ್ಲಿ ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿಲ್ಲ. ಬದಲಿಗೆ ಅವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಲಿದ್ದಾರೆ. ಇತ್ತ ಕಳೆದ ಆವೃತ್ತಿಯಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿದ್ದ ರೋಹಿತ್ ಶರ್ಮಾ, ಈ ಪಂದ್ಯದಲ್ಲಿ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆದಿದ್ದಾರೆ.

ಕೋಲ್ಕತ್ತಾ ನೈಟ್ ರೈಡರ್ಸ್: ಫಿನ್ ಅಲೆನ್, ಅಜಿಂಕ್ಯ ರಹಾನೆ (ನಾಯಕ), ಕ್ಯಾಮೆರೂನ್ ಗ್ರೀನ್, ಆಂಗ್ಕ್ರಿಶ್ ರಘುವಂಶಿ (ವಿಕೀ), ರಿಂಕು ಸಿಂಗ್, ರಮಣದೀಪ್ ಸಿಂಗ್, ಅನುಕುಲ್ ರಾಯ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಬ್ಲೆಸಿಂಗ್ ಮುಜರಬಾನಿ

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ರಿಯಾನ್ ರಿಕಲ್ಟನ್ (ವಿಕೀ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಶೆರ್ಫಾನ್ ರುದರ್‌ಫೋರ್ಡ್, ನಮನ್ ಧೀರ್, ಶಾರ್ದೂಲ್ ಠಾಕೂರ್, ಮಯಾಂಕ್ ಮಾರ್ಕಾಂಡೆ, ಎಎಮ್ ಗಜನ್‌ಫರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !