March 29, 2026
Sunday, March 29, 2026
spot_img

ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಾಂಸಾಹಾರ ತಿನ್ನಲು ಬಿಡಲ್ಲ: ವಿವಾದ ಮೈ ಮೇಲೆ ಎಳೆದುಕೊಂಡ ದೀದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮೀನು ಮಾಂಸ ತಿನ್ನಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದು, ವಿವಾದದ ಸ್ವರೂಪ ಪಡೆದುಕೊಂಡಿದೆ.

ಬಂಗಾಳದಲ್ಲಿ ವಿಧಾನಸಭೆ ಚುನಾವಣಾ ಕಾವು ರಂಗೇರುತ್ತಿದ್ದು, ದೀದಿ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರ ನಡುವೆ ಬಂಗಾಳದಲ್ಲಿ ಜನರು ಮೀನು ಮಾಂಸ ತಿನ್ನಬೇಕು ಎಂದರೆ ಟಿಎಂಸಿಕೆ ಮತ ಹಾಕಬೇಕು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೀನು, ಮಾಂಸ, ಮೊಟ್ಟೆ ತಿನ್ನುವುದನ್ನು ನಿಷೇಧಿಸುತ್ತಾರೆ. ಯಾಕೆಂದರೆ ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಮೀನು ತಿನ್ನುವುದು ನಿಷೇಧ ಎಂದು ಹೇಳಿದ್ದಾರೆ. ಇದರ ಬೆನ್ನಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮಮತಾ ಹೇಳಿಕೆ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿದೆ.

ಬಿಜೆಪಿಗೆ ಕೇವಲ ಗಲಭೆ ಮಾತ್ರ ಗೊತ್ತಿರುವುದು. ಅವರು ಬಂಗಾಳದ ಆಹಾರ ಪದ್ಧತಿ, ಸಂಸ್ಕೃತಿಯನ್ನು ಮುಳುಗಿಸಲು ಯತ್ನಿಸುತ್ತಾರೆ. ನಿಮ್ಮ ಆಹಾರದ ಹಕ್ಕನ್ನು ಕಸಿದುಕೊಳ್ಳುತ್ತಾರೆ. ಅವರು ಬೇರೆ ಯಾವುದೇ ಧರ್ಮದ ಮೇಲೆ ನಂಬಿಕೆ ಹೊಂದಿಲ್ಲ ಎಂದು ಟೀಕಿಸಿದರು.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಶಾಂತಿಯನ್ನು ಬಯಸುತ್ತಿದೆ. ಒಂದು ವೇಳೆ ಬಿಜೆಪಿ ಬಂದರೆ ಅವರು ಮುಗ್ದ ಜನರ ಮೇಲೆ ದಾಳಿ ಮಾಡುತ್ತಾರೆ. ಈಗಾಗಲೇ ಬಂಗಾಳ ಜನತೆಗೆ ಬಿಜೆಪಿ ಮೇಲಿನ ನಂಬಿಕೆಯೇ ಹೊರಟು ಹೋಗಿದೆ ಎಂದು ವಾಗ್ದಾಳಿ ನಡೆಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !