July 15, 2026
Wednesday, July 15, 2026
spot_img

WEATHER | ರಾಜ್ಯದಲ್ಲಿ ಕೂಲ್‌ ಕೂಲ್‌ ವಾತಾವರಣ, ಇಂದು ಕೂಡ ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯವೆಲ್ಲ ಕೂಲ್‌ ಕೂಲ್‌ ಆಗಿದ್ದು, ಇಂದು ಕೂಡ ಮಳೆಯ ಸಾಧ್ಯತೆ ಇದೆ.

ಬೆಳ್ಳಂಬೆಳಗ್ಗೆ ಸೂರ್ಯನ ಬಿರುಬಿಸಿಲು ಮಾಯವಾಗಿದ್ದು, ಎಲ್ಲೆಡೆ ಮೋಡ ಕವಿದ ವಾತಾವರಣವಿದೆ. ಇಂದು ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ ಮೈಸೂರು, ಕೋಲಾರ, ಹಾಸನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ನಿನ್ನೆ ಸುರಿದ ಮಳೆಗೆ ಬೆಂಗಳೂರು ಹೈರಾಣಾಗಿದ್ದು, ಹಲವು ರಸ್ತೆಗಳಲ್ಲಿ ನೀರು ನಿಂತಿದೆ. ಕೆಲವು ಕಡೆ ವಿದ್ಯುತ್‌ ವ್ಯತ್ಯಯ ಕೂಡ ಉಂಟಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !